ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಮುಂದಿನ 24 ಗಂಟೆ ಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ
Team Udayavani, Sep 23, 2024, 11:53 AM IST
ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸೋಮ ವಾರ(ಸೆ.23) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.
ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ,
ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ.
ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಿದೆ. ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬ ಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತಮಮಳೆ
ಮಂಗಳವಾರ(ಸೆ.24) ಬೆಳಗ್ಗೆವರೆಗಿನ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ
ಕೆಲವು ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದರೆ, ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.