Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

Team Udayavani, Sep 24, 2024, 6:00 AM IST

supreme-Court

ಮಕ್ಕಳನ್ನು ಒಳಗೊಂಡ ಲೈಂಗಿಕ ದೃಶ್ಯಗಳಿರುವ ಅಶ್ಲೀಲ ವೀಡಿಯೋಗಳನ್ನು ಕೇವಲ ಡೌನ್‌ಲೋಡ್‌ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕೊÕà ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಗಳ ಪ್ರಕಾರ ಅಪರಾಧ ಅಲ್ಲ ಎಂಬ ಮದ್ರಾಸ್‌ ಹೈಕೋರ್ಟ್‌ನ ತೀರ್ಪನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್‌ನ ನಡೆ ಸ್ವಾಗತಾರ್ಹ ಮತ್ತು ಐತಿಹಾಸಿಕವಾದುದು. ಕಾನೂನು ಮತ್ತು ಕಾಯಿ ದೆಗಳನ್ನು ಕೇವಲ ಕಣ್ಣುಮುಚ್ಚಿ ಅನುಸರಿಸಬಾರದು ಅಥವಾ ಅನ್ವಯಿಸ ಬಾರದು; ಮಾನವ ಸಹಜ ವಿವೇಚನೆಯನ್ನೂ ಉಪಯೋಗಿಸಬೇಕು ಎನ್ನುವುದಕ್ಕೆ ಸುಪ್ರೀಂ ಕೋರ್ಟ್‌ನ ತೀರ್ಪು ಶ್ರೇಷ್ಠ ಉದಾಹರಣೆಯಂತಿದೆ.

ಮದ್ರಾಸ್‌ ಹೈಕೋರ್ಟ್‌ನ ತೀರ್ಪನ್ನು ರದ್ದುಪಡಿಸಿ, ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಕೂಡ ಪೋಕೊÕà ಹಾಗೂ ಐಟಿ ಕಾಯಿದೆಗಳಡಿ ಶಿಕ್ಷಾರ್ಹ ಅಪರಾಧಗಳು ಎಂಬ ತೀರ್ಪನ್ನು ಸರ್ವೋಚ್ಚ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾ| ಜೆ.ಬಿ. ಪರ್ದಿವಾಲಾ ಮತ್ತು ನ್ಯಾ| ಮನೋಜ್‌ ಮಿಶ್ರಾ ಅವರಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ನೀಡಿದೆ. ಮುಂದುವರಿದು, ಮಕ್ಕಳ ಅಶ್ಲೀಲ ದೃಶ್ಯಗಳು ಮತ್ತು ಅವುಗಳ ಕಾನೂನಾತ್ಮಕ ಪರಿಣಾಮಗಳ ಕುರಿತಾಗಿ ಮಾರ್ಗ ದರ್ಶಿ ಸೂತ್ರಗಳನ್ನು ಕೂಡ ನೀಡಿದೆ. ಪೋಕೊÕà ಕಾಯಿದೆಯಡಿ ಮಕ್ಕಳ ಅಶ್ಲೀಲ ದೃಶ್ಯಗಳನ್ನು “ಮಕ್ಕಳನ್ನು ಲೈಂಗಿಕವಾಗಿ ಶೋಷಿಸಬಹುದಾದ ಮತ್ತು ದೌರ್ಜನ್ಯಕ್ಕೀಡು ಮಾಡಬಹುದಾದ ಆಕರಗಳು’ ಎಂಬುದಾಗಿ ವ್ಯಾಖ್ಯಾನಿಸಿ ಸೇರ್ಪಡೆಗೊಳಿಸುವುದಕ್ಕಾಗಿ ಕಾಯಿದೆಗೆ ತಿದ್ದುಪಡಿ ತರುವಂತೆ ಸಂಸತ್ತಿಗೆ ತಾನು ಸೂಚನೆ ನೀಡಿರುವುದಾಗಿ ನ್ಯಾಯಪೀಠ ಹೇಳಿದೆ.

ಈ ಸಂದರ್ಭದಲ್ಲಿ ನ್ಯಾಯಪೀಠವು ಹೇಳಿರುವ ಅಂಶವೊಂದು ಈ ಇಡೀ ತೀರ್ಪಿನ ಮಹತ್ವವನ್ನು ಸಾರುತ್ತದೆ. ಮಕ್ಕಳನ್ನು ಬಲಿಪಶು ಮಾಡುವ ಮತ್ತು ದೌರ್ಜನ್ಯಕ್ಕೀಡು ಮಾಡುವ ನಿಟ್ಟಿನಲ್ಲಿ ಮಕ್ಕಳ ಅಶ್ಲೀಲ ದೃಶ್ಯಗಳು ಅಥವಾ “ಪೋರ್ನೋಗ್ರಫಿ’ಯು ಹೊಂದಿರುವ ಅನುರಣನಾತ್ಮಕ ಪರಿಣಾಮವನ್ನು ಹಾಗೂ ತತ್ಸಂಬಂಧಿ ಕುಕೃತ್ಯಗಳನ್ನು ಕಾನೂನು ಪಾಲಕರ ಗಮನಕ್ಕೆ ತರುವ ಸಮಾಜ ಮತ್ತು ಸಂಬಂಧಪಟ್ಟ ಎಲ್ಲರ ಪಾತ್ರದ ಬಗ್ಗೆ ನಾವು ನೀಡಿರುವ ಮಾರ್ಗದರ್ಶಿ ಸೂತ್ರದಲ್ಲಿ ಹೇಳಿದ್ದೇವೆ ಎಂಬುದಾಗಿ ನ್ಯಾಯಪೀಠ ತಿಳಿಸಿದೆ.

ಮೂಲದಲ್ಲಿ, ಈ ಪ್ರಕರಣವು 28 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಮಕ್ಕಳ ಅಶ್ಲೀಲ ದೃಶ್ಯಗಳನ್ನು ಮೊಬೈಲ್‌ ಫೋನ್‌ನಲ್ಲಿ ಡೌನ್‌ಲೋಡ್‌ ಮಾಡಿ ವೀಕ್ಷಿಸಿದ್ದಕ್ಕೆ ಸಂಬಂಧಿಸಿದ್ದು. ಪ್ರಕರಣದ ವಿಚಾರಣೆ ನಡೆಸಿದ ಮದ್ರಾಸ್‌ ಹೈಕೋರ್ಟ್‌, ಮಕ್ಕಳ ಲೈಂಗಿಕ ದೃಶ್ಯಗಳನ್ನು ಕೇವಲ ಡೌನ್‌ಲೋಡ್‌ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕೊÕà ಮತ್ತು ಐಟಿ ಕಾನೂನು ಪ್ರಕಾರ ಅಪರಾಧವಲ್ಲ ಎಂದಿತ್ತು. ಅಂದರೆ ಮದ್ರಾಸ್‌ ಹೈಕೋರ್ಟ್‌ ಕಾನೂನನ್ನು ಕಣ್ಣುಮುಚ್ಚಿ ಅನುಸರಿಸಿತ್ತೇ ವಿನಾ ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿರುವಂತೆ ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆಯಿಂದ ಆಗಬಹುದಾದ “ಅನುರಣನಾತ್ಮಕ’ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ನಡೆಸಿರಲಿಲ್ಲ. ಸರಳವಾಗಿ ಹೇಳುವುದಾದರೆ, ಅಂತಹ ದೃಶ್ಯಗಳನ್ನು ವೀಕ್ಷಿಸುವ ಮೂಲಕ ಮಾನಸಿಕವಾಗಿ ಭ್ರಷ್ಟನಾಗಬಲ್ಲ ವ್ಯಕ್ತಿ ಮುಂದೊಂದು ದಿನ ತಾನೂ ಅಂತಹ ಕೃತ್ಯ ಎಸಗುವ ಸಾಧ್ಯತೆಯಿದೆ ಎಂಬುದನ್ನು ಸುಪ್ರೀಂ ಕೋರ್ಟ್‌ ಗಮನಿಸಿದೆ.

ಸರ್ವೋಚ್ಚ ನ್ಯಾಯಮೂರ್ತಿಗಳೇ ಹೇಳಿರುವಂತೆ, ಇದೊಂದು ಮೈಲಿಗಲ್ಲು ಎನಿಸಬಲ್ಲ ತೀರ್ಪು ಹಾಗೂ ಮಕ್ಕಳನ್ನು ಲೈಂಗಿಕವಾಗಿ ಶೋಷಿಸುವ ಮತ್ತು ದೌರ್ಜನ್ಯಕ್ಕೀಡು ಮಾಡುವ ಆಕರಗಳ ಬಗ್ಗೆ ನ್ಯಾಯಾಂಗ ಇಷ್ಟು ವಿಸ್ತೃತವಾಗಿ ಪರಿಶೀಲಿಸಿರುವ ಉದಾಹರಣೆ ಜಗತ್ತಿನಲ್ಲೇ ಪ್ರಥಮ. ಹೀಗಾಗಿಯೇ ಸ್ವಾಗತಾರ್ಹ ತೀರ್ಪು ಇದು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.