MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ, ಕಾನೂನಿನ ಅಡಿ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುವೆ: ಸಿದ್ದರಾಮಯ್ಯ

Team Udayavani, Sep 24, 2024, 6:03 PM IST

CM-preess

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯೂಷನ್‌)ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯ ಹೈಕೋರ್ಟ್‌ (High Court) ಸಂಪೂರ್ಣ ತಿರಸ್ಕರಿಸಿ, ಆದೇಶದಲ್ಲಿನ ಸೆಕ್ಷನ್ 17ಎ ಪಿಸಿ ಕಾಯಿದೆಗೆ ಮಾತ್ರ ಸೀಮಿತಗೊಳಿಸಿ ನ್ಯಾಯಮೂರ್ತಿಗಳು ಪ್ರಾಥಮಿಕ ತನಿಖೆಗೆ ತೀರ್ಪು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನ್ಯಾಯಾಲಯದ ಆದೇಶವನ್ನು ವಿಶ್ಲೇಷಿಸಿದರು.

ಹೈಕೋರ್ಟ್ ಮಂಗಳವಾರ ನೀಡಿದ ಆದೇಶದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರು, ಸಂಪುಟದ ಸಹದ್ಯೋಗಿಗಳು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದರು.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ  ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯ ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ಬಿಜೆಪಿ-ಜೆಡಿಎಸ್‌ನಿಂದ ರಾಜಕೀಯ ಪಿತೂರಿ:
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಆದರೆ ಬಿಜೆಪಿ-ಜೆಡಿಎಸ್‌ ಪಕ್ಷಗಳು ರಾಜ್ಯದ ಜನರಿಂದ ಸಂಪೂರ್ಣ ಬಹುಮತದಿಂದ ಈ ವರೆಗೆ ಅಧಿಕಾರಕ್ಕೆ ಬಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನ ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.


ಕೇಂದ್ರ ಸರಕಾರದಿಂದ ಸೇಡಿನ ರಾಜಕಾರಣ:
ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ನನ್ನ ವಿರುದ್ದ ಮಾತ್ರ ಸೇಡಿನ ರಾಜಕೀಯ ಮಾಡುತ್ತಿಲ್ಲ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರ ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯ ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ ಎಂದು ಹೇಳಿದರು.

ಪಕ್ಷದ ಹೈಕಮಾಂಡ್‌, ಸಚಿವರು, ಶಾಸಕರ ಬೆಂಬಲವಿದೆ:
ಡಿಸಿಎಂ ಸೇರಿದಂತೆ ಸಚಿವರು, ಕಾಂಗ್ರೆಸ್‌ ಪಕ್ಷದ ಹೈಕಮಾಂಡ್, ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತೀಕಾರಕ್ಕೆ ಇಳಿದಿದೆ ಎಂದು ಹೇಳಿದರು.

ರಾಜೀನಾಮೆ ಕೊಡಲ್ಲ: 
17ಎ ಪಿಸಿ ಕಾಯಿದೆಯಡಿ ತನಿಖೆಗೆ ಅನುಮತಿ ಕೊಟ್ಟ ತಕ್ಷಣ ತಪ್ಪು ಮಾಡಿದ್ದೇನೆ ಅಂತ ಅರ್ಥವಲ್ಲ, ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

10-hubli

Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

6-sirsi

BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

5-thirthahalli

ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

Dassault maintenance center in Noida for Rafale?

Rafale: ರಫೇಲ್‌ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.