Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ
Team Udayavani, Sep 24, 2024, 5:50 PM IST
ಮೋರ್ಗನ್ಸ್‌ಗೇಟ್: ಜಪ್ಪು ಮೋರ್ಗನ್ಸ್‌ಗೇಟ್‌ಬಳಿಯ ರಾಮ್‌ಭವನ್ ಹೊಟೇಲ್ ಪಕ್ಕದ ಒಳಹಾದಿ ಸಂಪೂರ್ಣವಾಗಿ ಕೆಟ್ಟು ಹೋಗಿ, ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸುಮಾರು 12 ಮನೆಗಳಿಗೆ ಈ ಹಾದಿ ಸಂಪರ್ಕ ಕಲ್ಪಿಸುತ್ತಿದೆ. ಪ್ರತಿದಿನ ಸಾಕಷ್ಟು ಮಂದಿ ಈ ಹಾದಿಯ ಮೂಲಕವೇ ಆಚೀಚೆ ಒಡಾಡುತ್ತಾರೆ. ಮನೆಯವರ ದ್ವಿಚಕ್ರ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ. ಹಿರಿಯ ನಾಗರಿಕರು, ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೂ ನಡೆಯುವುದು ಕಷ್ಟಕರವಾಗಿದೆ.
ತ್ಯಾಜ್ಯ ನೀರು ರಸ್ತೆಗೆ
ಪಕ್ಕದಲ್ಲಿ ನಡೆಯುತ್ತಿರುವ ನಿರ್ಮಾಣ ಕೆಲಸಗಳಿಗೆ ಸಂಬಂಧಿಸಿದ ಕಾರ್ಮಿಕರು ವಾಸವಾಗಿದ್ದು, ಅವರು ತ್ಯಾಜ್ಯ ನೀರನ್ನು ಕೂಡ ರಸ್ತೆಗೆ ಹರಿಯ ಬಿಡುತ್ತಿದ್ದು, ಚರಂಡಿಯಲ್ಲಿ ಇದು ಸಂಗ್ರಹಗೊಳ್ಳುತ್ತಿದೆ. ಇದರಿಂದ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಇದೆ. ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ತತ್‌ಕ್ಷಣ ಕ್ರಮ ವಹಿಸಬೇಕು. ಒಳ ಹಾದಿಯನ್ನು ಸರಿಪಡಿಸಲೂ ಮನಪಾ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.