![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 25, 2024, 12:14 AM IST
ಉಡುಪಿ: ಚುನಾಯಿತ ಸರಕಾರವನ್ನು ಹೇಗಾದರೂ ಮಾಡಿ ಬೀಳಿಸಿ, ಸರಕಾರ ರಚಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಕೇಂದ್ರ ಸರಕಾರ ಕಳೆದ ಹತ್ತು ವರ್ಷಗಳಲ್ಲಿ ಐಟಿ, ಇಡಿ, ಸಿಬಿಐ ಬಳಸಿ 443 ವಿಪಕ್ಷದ ಶಾಸಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿದೆ. ಹಲವಾರು ಭ್ರಷ್ಟಾಚಾರ ಪ್ರಕರಣಗಳಿಂದ ಬೇಸತ್ತ ರಾಜ್ಯದ ಜನತೆ ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದರು. ಈಗ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ರಾಜ್ಯಪಾಲರು ಒಂದು ಅರ್ಜಿಯನ್ನು ಪಡೆಯುವಾಗ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಆದರೆ ರಾಜ್ಯಪಾಲರ ಕ್ರಮದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದು ಕರಾಳ ದಿನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ತಿಳಿಸಿದ್ದಾರೆ.
ಸಿಎಂಗೆ ಕಾಂಗ್ರೆಸ್ ನೈತಿಕ ಬೆಂಬಲ: ಅಭಯಚಂದ್ರ
ಮೂಡುಬಿದಿರೆ: ಅಧಿಕಾರಕ್ಕಾಗಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುವಲ್ಲಿ ಇತಿಹಾಸ ನಿರ್ಮಿಸಿರುವ ಬಿಜೆಪಿಯವರು ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಪದಚ್ಯುತಿಗಾಗಿ ಆಟ ಆಡುತ್ತಿದ್ದಾರೆ. ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ನತ್ತ ಹೆಜ್ಜೆ ಹಾಕಲಿದ್ದಾರೆ. ಅವರ ಹೋರಾಟಕ್ಕೆ ಕಾಂಗ್ರೆಸ್ ನೈತಿಕ ಬೆಂಬಲ ನೀಡುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಕೆ. ಅಭಯಚಂದ್ರ ತಿಳಿಸಿದರು.
ಸುಪ್ರೀಂ ಕೋರ್ಟ್‌ನಲ್ಲಿ ಖಂಡಿತ ಅವರಿಗೆ ಗೆಲುವಾಗುವ ನಿರೀಕ್ಷೆ ಇದೆ ಎಂದವರು ಅಭಿಪ್ರಾಯಪಟ್ಟರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.