Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Team Udayavani, Sep 25, 2024, 11:47 AM IST
ಬೆಂಗಳೂರು: ಮಲ್ಲೇಶ್ವರದ ಬಿಬಿಎಂಪಿ ಆಟ ಮೈದಾನದ ಗೇಟ್ ಬಿದ್ದು ಶಾಲಾ ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜತೆಗೆ ಗೇಟ್ ಅಳವಡಿಕೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿರುವ ಪಾಲಿಕೆ ನಾಲ್ವರ ಎಂಜಿನಿಯರ್‌ಗಳನ್ನು ಅಮಾನತು ಮಾಡಿದ್ದಾರೆ.
ಮಲ್ಲೇಶ್ವರಂ ದತ್ತಾತ್ರೇಯ ವಾರ್ಡ್ ನಲ್ಲಿರುವ ದಿ.ರಾಜ್ ಶಂಕರ್ ಆಟದ ಮೈದಾನದ ಅಭಿವೃದ್ಧಿ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅವನ್ನು ಸೋಮವಾರ ಪಾಲಿಕೆ ಉಪ ಆಯುಕ್ತರು (ಆಡಳಿತ) ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಈ ಬೆನ್ನೆಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪಾಲಿಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. 2021ರ ಮೇ 21 ರಂದು ಘಟನೆ ನಡೆದಿರುವ ಆಟದ ಮೈದಾನದ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.