Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ದೂರು ದಾಖಲು
ಆತನ ಬಳಿ ನನ್ನ ಬೆತ್ತಲೆ ಫೋಟೋ, ವಿಡಿಯೋವಿದೆ.. ಆರೋಪಕ್ಕೆ ಹರ್ಷ ಸಾಯಿ ಹೇಳಿದ್ದೇನು?
Team Udayavani, Sep 25, 2024, 3:01 PM IST
ಹೈದರಾಬಾದ್: ಖ್ಯಾತ ಯೂಟ್ಯೂಬರ್ (Youtuber) ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್(Social media influencer) ಹರ್ಷ ಸಾಯಿ (Harsha Sai) ವಿರುದ್ಧ ನಟಿಯೊಬ್ಬರು ಅತ್ಯಾಚಾರ ಹಾಗೂ ವಂಚನೆಯ ಆರೋಪವನ್ನು ಮಾಡಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಯಾರು ಈ ಯುವತಿ?:
ಮುಂಬೈಯಿಂದ ಹೈದರಾಬಾದ್‌ಗೆ ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಹುಡುಕಿ ಬಂದ ಯುವತಿ ಕೆಲ ಸಿನಿಮಾಗಳಲ್ಲಿ ನಟಿಸಿದ್ದಾಳೆ. ತೆಲುಗು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಆಕೆಗೆ ಖಾಸಗಿ ಪಾರ್ಟಿಯೊಂದಲ್ಲಿ ಹರ್ಷ ಸಾಯಿ ಪರಿಚಯವಾಗಿದ್ದರು. ಇದಾದ ಬಳಿಕ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿದೆ. ಯುವತಿಗೆ ಹರ್ಷ ಸಾಯಿ ಮದುವೆ ಆಗುವುದಾಗಿ ಭರವಸೆ ನೀಡಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಹೇಳಿರುವುದಾಗಿ ರಾಜೇಂದ್ರನಗರ ಡಿಸಿಪಿ ಶ್ರೀನಿವಾಸ್ ಹೇಳಿದ್ದಾರೆ.
ನಾವು ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದು ನನ್ನಿಂದ ಹರ್ಷ ಸಾಯಿ 2 ಕೋಟಿ ರೂ. ಪಡೆದಿದ್ದರು ಎಂದು ನಟಿ ಆರೋಪಿಸಿದ್ದಾರೆ.
ಹರ್ಷ ನನ್ನ ಮೇಲೆ ಅತ್ಯಾಚಾರ ಮಾಡಿ ನನ್ನ ಬೆತ್ತಲೆ ಫೋಟೋ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಈ ಬಗ್ಗೆ ಯುವತಿ ಹೈದರಾಬಾದ್ನ ನರಸಿಂಗ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಯುವತಿಯನ್ನು ನರಸಿಂಗಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಫಲಿತಾಂಶ ಹೊರಬಿದ್ದ ನಂತರ ಹೆಚ್ಚಿನ ವಿವರಗಳು ಹೊರಬರಲಿದೆ.
ಯೂಟ್ಯೂಬರ್ ಹರ್ಷ ಸಾಯಿ ಹೇಳಿದ್ದೇನು?:
ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಹರ್ಷ ಸಾಯಿ, “ಈ ಆರೋಪಗಳೆಲ್ಲವೂ ಹಣ ಸುಲಿಗೆ ಮಾಡಲು ಆಗುತ್ತಿದೆ. ನನ್ನ ಬಗ್ಗೆ ನಿಮಗೆಲ್ಲ ತಿಳಿದಿದೆ. ಶೀಘ್ರದಲ್ಲೇ ಸತ್ಯ ಹೊರಬರುತ್ತದೆ ಎಂದು ಹರ್ಷ ಸಾಯಿ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಪ್ರಕರಣದ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸುವುದಾಗಿ ಹೇಳಿದ್ದು, ಇನ್ನು ಮುಂದೆ ತಮ್ಮ ವಕೀಲರು ಈ ಬಗ್ಗೆ ಪ್ರತಿಕ್ರಿಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದ ಹರ್ಷ ಸಾಯಿ ಅವರು ಯೂಟ್ಯೂಬ್‌ನಲ್ಲಿ ಮಾನವೀಯ ನೆಲೆಯ ವಿಡಿಯೊಗಳಿಗೆ ಹೆಸರುವಾಸಿಯಾಗಿದ್ದಾರೆ. ಯೂಟ್ಯೂಬ್ ನಲ್ಲಿ ನಾನಾ ಭಾಷೆಯಲ್ಲಿ ಅವರು ಚಾನೆಲ್ ಹೊಂದಿದ್ದಾರೆ. ಮಿಲಿಯನ್ ಗಟ್ಟಲೆ ಸಬ್ ಸ್ಕೈಬರ್ಸ್ ಅವರಿಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನು ಮಂಜೂರು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.