Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
ಕಾನೂನಿಗೆ ಗೌರವ ಸಲ್ಲಿಸಬೇಕಾದದ್ದು ಎಲ್ಲರ ಕರ್ತವ್ಯ
Team Udayavani, Sep 25, 2024, 5:24 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನಿಗೆ ತಲೆ ಬಾಗುತ್ತಾರೆ ಎನ್ನುವ ವಿಶ್ವಾಸವಿದೆ. ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳಿಲ್ಲ. ಬೇರೆಯವರು ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಜೀವನ ತೆರೆದ ಪುಸ್ತಕ ಎಂದು ಹೇಳಿಕೊಳ್ಳುತ್ತಾರೆ. ಆ ಪುಸ್ತಕದಲ್ಲಿ ಕೆಲವು ತಪ್ಪುಗಳಾಗಿವೆ ಎಂದು ಕೋರ್ಟ್ ಹೇಳಿದೆ. ಕಾನೂನಿಗೆ ಗೌರವ ಸಲ್ಲಿಸಬೇಕಾದದ್ದು ಎಲ್ಲರ ಕರ್ತವ್ಯ. ಈ ಆರೋಪದಿಂದ ಹೊರಬರುವವರೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹಿಂದೆ ಇಂತಹ ಪರಿಸ್ಥಿತಿ ಎದುರಾದಾಗ ರಾಜೀನಾಮೆ ನೀಡಿ ನಂತರ ಅಧಿಕಾರ ಪಡೆದುಕೊಂಡಿರುವ ಉದಾಹರಣೆಗಳಿವೆ ಎಂದರು.
ಸಿದ್ದರಾಮಯ್ಯ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಅವರೊಂದಿಗೆ ಒಡನಾಟ ಹೊಂದಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಅವರು ಕಾನೂನಿಗೆ ಗೌರವ ಕೊಡುತ್ತಾರೆ. ಕೋರ್ಟ್ ಆದೇಶದ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ತನಿಖೆ ಬಳಿಕ ಸಿಎಂ ಸ್ಥಾನಕ್ಕೆ ಪುನಃ ಅಧಿಕಾರ ಸ್ವೀಕಾರ ಮಾಡಲಿ ಎಂದು ಹೇಳಿದರು.
ಬಿಜೆಪಿಯಲ್ಲಿ ಬಣ ರಾಜಕಾರಣವಿಲ್ಲ. ಮನೆಯಲ್ಲಿ ಬಹಳ ಜನ ಬುದ್ದಿವಂತರು ಇದ್ದಾಗ ಸ್ವಲ್ಪ ಭಿನ್ನಾಭಿಪ್ರಾಯ ಬರುವುದು ಸಹಜ ಎಂದ ಅವರು, ರಾಯಣ್ಣ ಬ್ರಿಗೇಡ್, ಚನ್ನಮ್ಮ ಬ್ರಿಗೇಡ್ ಯಾರು ಮಾಡುತ್ತಿದ್ದಾರೆ ಅವರನ್ನೇ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಜಾಮೀನು ಪಡೆದ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಸಿಎಂ ಸಿದ್ದರಾಮಯ್ಯ ಸುಳಿವು
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Controversy: ಎಚ್‌ಡಿಕೆಗೆ “ಕರಿಯ” ಹೇಳಿಕೆ ವಿವಾದ; ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Mangaluru: ಸ್ಕೂಟರ್ ಕಳವು; ಪ್ರಕರಣ ದಾಖಲು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Thekkatte: ಹುಣ್ಸೆಮಕ್ಕಿ; ಟಿಪ್ಪರ್ ಲಾರಿ ಚಾಲಕನ ಓವರ್ ಟೇಕ್ ಅವಾಂತರ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.