Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

ಅರ್ಧಕ್ಕೆ ನಿಂತ‌ ಶೌಚಾಲಯ ಕಟ್ಟಡ

Team Udayavani, Sep 25, 2024, 10:28 PM IST

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

ಮಸ್ಕಿ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರ ಲಕ್ಷಾಂತರ ರೂಪಾಯಿ ವ್ಯಯಿಸುತ್ತಿದೆ, ಆದರೆ ಸರ್ಕಾರದ ಹಣ ಯಾವ ರೀತಿ ಪೋಲು ಆಗುತ್ತಿದೆ ಎಂಬುದಕ್ಕೆ ತಾಲೂಕಿನ ಮಾರಲದಿನ್ನಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ನಿರ್ಮಿಸಿರುವ‌‌ ಶೌಚಾಲಯ ಕಟ್ಟಡವೇ ಸಾಕ್ಷಿಯಾಗಿದೆ.

ಇಲ್ಲಿನ ಸರ್ಕಾರಿ ಶಾಲೆಯಲ್ಲಿ 70ಕ್ಕೂ ಹೆಚ್ಚಿನ ಮಕ್ಕಳು ಇದ್ದು, ಮಕ್ಕಳಿಗೆ ಮೂತ್ರ ವಿಸರ್ಜನೆಗೆ ಅನುಕೂಲವಾಗಲೆಂದು ನರೇಗಾ ಯೋಜನೆ ಅಡಿಯಲ್ಲಿ 5ಲಕ್ಷ ರೂ.ವೆಚ್ಚದಲ್ಲಿ ಶೌಚಾಲಯ ಕಟ್ಟಡ ನಿರ್ಮಿಸಿ ಗುತ್ತಿಗೆದಾರರು ಅರ್ಧಕ್ಕೆ ಬಿಟ್ಟಿರುವುದರಿಂದ ಶೌಚಾಲಯ ಗೋಡೆ ಶಿಥಿಲಾವಸ್ಥೆಗೆ ತಲುಪಿದ್ದು, ಮೂತ್ರ ವಿಸರ್ಜನೆಗೆ ಶಾಲಾ ಮಕ್ಕಳು ಶಿಕ್ಷಕರು ಪರದಾಡುವಂತಾಗಿದೆ.

ಶಾಲಾ ಕೊಠಡಿಯಲ್ಲೆ ಮೂತ್ರ ವಿಸರ್ಜನೆ
ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಕಟ್ಟಡ ಕಾಮಗಾರಿ‌ ನೆನೆಗುದಿಗೆ ಬಿದ್ದಿರುವುದರಿಂದ ಶಾಲೆಯ ಆವರಣದಲ್ಲಿನ ಹಳೆ ಕಟ್ಟಡದಲ್ಲಿ ಶಾಲಾ ಮಕ್ಕಳು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಶಿಕ್ಷಕರು ಹೊರ ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ. ಅದರೇ ಅನುದಾನ ಬಿಡುಗಡೆಯಾದರು , ಸಹ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಕಾಮಗಾರಿ ಅರ್ಧಕ್ಕೆ ಮೊಟಕು ಗೊಳಿಸಲಾಗಿದೆ.

ಹೀಗಾಗಿ ಶಾಲೆಯ ಮಕ್ಕಳು ಪ್ರಾಣಭಯದಲ್ಲೇ ಹಳೆ ಕಟ್ಟಡದ ಕೊಠಡಿಯಲ್ಲಿ ಮೂತ್ರ. ವಿಸರ್ಜನೆ ಮಾಡುತ್ತಿದ್ದು, ಮೂತ್ರ ವಿಸರ್ಜನೆ ‌ಮಾಡುತ್ತಿರುವ ಹಳೇ ಕೊಠಡಿಯಲ್ಲಿ ಸೊಳ್ಳೆ ಉತ್ಪತ್ತಿಯಾಗಿ ಡೇಂಘೀ, ಮಲೇರಿಯಾಗಳಂತ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.‌ಅರ್ಧಕ್ಕೆ‌ ಮೊಟಕುಗೊಳಿಸಿರುವ ಶೌಚಾಲಯ ಕಟ್ಟಡ ಪೂರ್ಣಗೊಳಿಸಿ ಶಾಲಾ‌ ಮಕ್ಕಳಿಗೆ ಅನುಕೂಲ‌ ಕಲ್ಪಿಸಬೇಕೆಂದು ಶಾಲಾ ಮಕ್ಕಳ ಪೋಷಕರು ‌ಆಗ್ರಹಿಸಿದ್ದಾರೆ.

ಮುಖ್ಯ ದ್ವಾರದ ಮುಂದೆ ಶೌಚಾಲಯ ಕಟ್ಟಡ ನಿರ್ಮಾಣ:
ಶೌಚಾಲಯ ಕಟ್ಟಡವನ್ನು ತರಗತಿ ಕೋಣೆ, ಶಾಲಾ ಮುಖ್ಯದ್ವಾರದಿಂದ ಅಂತರದಲ್ಲಿ ಶೌಚಾಲಯ ಕಟ್ಟಡ ಕಟ್ಟಬೇಕಿತ್ತು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆದಿಂದಾಗಿ ಶಾಲೆಯ ಕಾಂಪೌಂಡ್ ಗೇಟಿನ ಮುಂಭಾಗದಲ್ಲಿ ಕಟ್ಟಲಾಗಿದೆ. ಶೌಚಾಲಯ ಬಳಕೆ ಮಾಡಿದ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗಬ್ಬು ವಾಸನೆ ಬೀರುವ ಸಾಧ್ಯತೆಗಳಿದೆ. ಅರ್ಧ ಕಟ್ಟಿರುವ ಶೌಚಾಲಯ ಕಟ್ಟಡವನ್ನು ತೆರವುಗೊಳಿಸಿ ಸೂಕ್ತ ಜಾಗದಲ್ಲಿ ಶೌಚಾಲಯ ಕಟ್ಟಡ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಕಟ್ಟಿರುವ ಶೌಚಾಲಯ ಕಟ್ಟಡ ಪರಿಶೀಲಿಸಿ, ಕಟ್ಟಡ ಬೇಗನೆ ಮುಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಶಿವಾನಂದರೆಡ್ಡಿ ,‌ ನರೇಗಾ.ಎಡಿ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.