Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ!
Team Udayavani, Sep 26, 2024, 10:02 AM IST
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡಿ ಕೊಂಡು ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಅಧಿಕಾರಿಗಳ ಬೋನಿಗೆ ಬಿದ್ದಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.
ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಅಲ್ಲಿನ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಕ್ಷಾಂತರ ಮಂದಿ ಐಟಿ ಉದ್ಯೋ ಗಿಗಳು ಕೆಲಸ ಮಾಡುತ್ತಿರುವ ಎಲೆಕ್ಟ್ರಾನಿಕ್ ಸಿಟಿ ಸುತ್ತ ಮುತ್ತ ಚಿರತೆ ಓಡಾಟದ ಬಗ್ಗೆ ಹಲವು ದಿನಗಳಿಂದ ಅರಣ್ಯ ಅಧಿಕಾರಿಗಳು ಶೋಧ ನಡೆಸುತ್ತಿದ್ದರು. ಬೆಂಗಳೂರಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮೂರು ಬೋನ್‌ಗಳನ್ನು ಇಟ್ಟು ಚಿರತೆ ಸೆರೆ ಹಿಡಿದಿದ್ದಾರೆ. ಈ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲಾಗಿದೆ.
ಚಿರತೆಗೆ ಮೈಕ್ರೋ ಚಿಪ್ ಅಳವಡಿಕೆ: ಸೆರೆಯಾದ ಚಿರತೆಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇದರಿಂದ ಮತ್ತೆ ಈ ಚಿರತೆ ಎಲ್ಲಿಯಾದರೂ ಪತ್ತೆಯಾದಾಗ ತಿಳಿಯಲು ಸಹಾಯ ಆಗಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ಡಾ.ಕಿರಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.