IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ? ಇಲ್ಲಿದೆ ಹರಾಜು ವಿವರ
Team Udayavani, Sep 26, 2024, 10:23 AM IST
ನವದೆಹಲಿ: ಈ ಬಾರಿ ಐಪಿಎಲ್ ಹರಾಜಿನ (IPL Auction) ವೇಳೆ ಫ್ರಾಂಚೈಸಿಗಳಿಗೆ ಐವರು ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ (BCCI) ಅವಕಾಶ ನೀಡುವ ಸಾಧ್ಯತೆಯಿದೆ. ಇದೇ ವೇಳೆ ಆರ್‌ಟಿಎಮ್ (Right To Match Card) ಆಯ್ಕೆಯನ್ನು ರದ್ದು ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಒಂದು ವೇಳೆ ಇದು ಸಾಧ್ಯವಾದರೆ ಆರ್‌ಸಿಬಿ ಸೇರಿದಂತೆ ಪ್ರಮುಖ ಫ್ರಾಂಚೈಸಿಗಳಿಗೆ ತಮ್ಮ ತಾರೆಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ. ಮುಖ್ಯವಾಗಿ ಚೆನ್ನೈ ಕಿಂಗ್ಸ್, ಮುಂಬೈ ಇಂಡಿಯನ್ಸ್ ನಂತಹ ತಂಡಗಳಿಗೆ ಭಾರೀ ಅನುಕೂಲವಾಗಲಿದೆ.
ಚೆನ್ನೈ ತನ್ನ ಖ್ಯಾತ ಆಟಗಾರ ಎಂ.ಎಸ್.ಧೋನಿಯನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಈ ಹಿಂದಿನಂತೆ ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಿದ್ದರೆ ಚೆನ್ನೈಗೆ ಅದು ಕಷ್ಟವಾಗುತ್ತಿತ್ತು. ಇನ್ನು ಮುಂಬೈಗೆ ತನ್ನ ತಾರಾ ಆಟಗಾರರಾದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್‌ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ.
ಇತ್ತೀಚೆಗೆ ನಡೆದ ಐಪಿಎಲ್ ಫ್ರಾಂಚೈಸಿಗಳೊಂದಿಗಿನ ಬಿಸಿಸಿಐ ಸಭೆಯಲ್ಲಿ, ಹಲವು ಫ್ರಾಂಚೈಸಿಗಳು ಕನಿಷ್ಠ 5ರಿಂದ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿ ಎಂದು ವಿನಂತಿಸಿದ್ದವು. ಅದಕ್ಕೆ ಬಿಸಿಸಿಐ ಸಮ್ಮತಿಸಿದೆ ಎನ್ನಲಾಗಿದೆ. ಈ ವರ್ಷ ನವೆಂಬರ್‌ನಲ್ಲಿ ಐಪಿಎಲ್ ಹರಾಜು ನಡೆಯಲಿದೆ.
ಲಾಭವೇನು?: ಕನಿಷ್ಠ ಐವರನ್ನು ಉಳಿಸಿಕೊಳ್ಳುವುದರಿಂದ ಫ್ರಾಂಚೈಸಿಗಳು ತಮ್ಮ ತಾರಾ ಆಟಗಾರರನ್ನು ಉಳಿಸಿಕೊಳ್ಳಬಹುದು. ಹಾಗೆಯೇ ತಮ್ಮ ಬ್ರಾಂಡ್ ಮೌಲ್ಯವನ್ನೂ ಕಾಪಾಡಿಕೊಳ್ಳಬಹುದು ಎಂದು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ.
ಮುಂಚೆ ಹೇಗಿತ್ತು?: 2022 ಐಪಿಎಲ್ ಋತುವಿನಿಂದಲೇ ಫ್ರಾಂಚೈಸಿಗಳು ನಾಲ್ವರನ್ನು ಉಳಿಸಿಕೊಳ್ಳಲು ಅವಕಾಶವಿತ್ತು. ಈ ಪೈಕಿ ಗರಿಷ್ಠ ಮೂವರು ಭಾರತೀಯರನ್ನು ಉಳಿಸಿಕೊಳ್ಳಬಹುದಿತ್ತು. ಗರಿಷ್ಠವೆಂದರೆ ಇಬ್ಬರು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಸಾಧ್ಯವಿತ್ತು. ಆ ಹೊತ್ತಿಗೆ ಆರ್‌ಟಿಎಂ ಅವಕಾಶವನ್ನು ರದ್ದು ಮಾಡಲಾಗಿತ್ತು. ಈ ಬಾರಿಯೂ ಅದನ್ನು ಮರುಸ್ಥಾಪಿಸುವ ಸಾಧ್ಯತೆಯಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.