Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ
Team Udayavani, Sep 27, 2024, 7:30 AM IST
ಮಂಗಳೂರು: ಅಮೆರಿಕದಲ್ಲಿ ಯಶಸ್ವಿಯಾಗಿ ಯಕ್ಷಗಾನ ಪ್ರವಾಸ ಕೈಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಹಾಗೂ ಅವರ ತಂಡ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು, ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು ಸ್ವಾಗತ ಕೋರಿದರು.
ಸತೀಶ್ ಶೆಟ್ಟಿ ನೇತೃತ್ವದ 9 ಮಂದಿಯ ತಂಡ ಅಮೆರಿಕದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ.
ಈ ವೇಳೆ ತಮ್ಮ ಅಮೆರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಅವರು, ದೇಶಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ಸಂಗತಿ ಎಂದರು.
ಅಮೆರಿಕದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಿಸಿರುವುದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೆರಿಕ ಘಟಕದ ಅಧ್ಯಕ್ಷ ಡಾ| ಅರವಿಂದ ಉಪಾಧ್ಯಾಯ, ಡಾ| ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದು, ಅವರಿಗೆ ಧನ್ಯವಾದ ಸಲ್ಲಿಸುವೆ ಎಂದರು.
ಪ್ರೊ| ಎಂ.ಎಲ್. ಸಾಮಗ ಮಾತನಾಡಿ, ಅಮೆರಿಕದ ಜನರು ನಮ್ಮ ಯಕ್ಷಗಾನ ತಂಡದ ಮೇಲೆ ತೋರಿಸಿದ ಪ್ರೀತಿ ಮರೆಯಲಾಗದ್ದು. ಪ್ರತಿಯೊಂದು ಪ್ರದರ್ಶನಕ್ಕೂ 500 ಜನರಿಗಿಂತ ಕಡಿಮೆ ಸೇರುತ್ತಿರಲಿಲ್ಲ. ನಮ್ಮ ತಂಡದಲ್ಲಿ ಕಲಾವಿದರು ಮಿತಿಯಲ್ಲಿ ಇದ್ದುದರಿಂದ ಅದಕ್ಕೆ ಸೂಕ್ತ ಎನಿಸುವ ಪ್ರಸಂಗ ಆಡಿ ತೋರಿಸಬೇಕಿತ್ತು. ಕೆಲವರು ತಾವು ವೇಷ ಹಾಕುತ್ತೇವೆ ಎಂದು ಮುಂದೆ ಬಂದರು ಹಾಗೂ ಕೆಲವರು ಭಾಗವತಿಕೆ ಕಲಿಯಲು ಆಸಕ್ತಿ ತೋರಿದರು. ಆನ್ ಲೈನ್ ಕ್ಲಾಸ್ ಬಗ್ಗೆಯೂ ವಿಚಾರಿಸಿದ್ದಾರೆ ಎಂದರು.
ಪಟ್ಲ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.
ಅಮೆರಿಕ ನಗರಗಳಲ್ಲಿ ಪಟ್ಲ ಫೌಂಡೇಶನ್ ಡೇ
ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಪ್ರದರ್ಶಿಸಿದ ಯಕ್ಷಗಾನ ಹಾಗೂ ಪಟ್ಲ ಫೌಂಡೇಷನ್ ಕಾರ್ಯ ಚಟುವಟಿಕೆಯನ್ನು ಮೆಚ್ಚಿ ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್‌ಫೀಲ್ಡ್ ನಗರದ ಮೇಯರ್‌ಸ್ಟೀವನ್ ವಿ. ಪೋಂಟೊ ಅವರು ಆ. 18 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ. ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ಮೇಯರ್ ಜುಲೈ 27 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.