ಕುಂಬಳೆ: 3 ತಿಂಗಳ ಗರ್ಭಿಣಿ ಸಾವು; ಪತಿ ಸೆರೆ
Team Udayavani, Sep 27, 2024, 12:02 AM IST
ಕುಂಬಳೆ: ಮೂರು ತಿಂಗಳ ಗರ್ಭಿಣಿ ಮಂಗಳೂರಿನ ವಾಮಂಜೂರು ಪಿಲಿಕುಳ ನಿವಾಸಿಯಾದ ವಿಜೇತಾ (32) ನೇಣು ಬಿಗಿದು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಪತಿ ಕಯ್ಯಾರು ಕನ್ನಟ್ಟಿಪಾರೆ ಶಾಂತಿಯೋಡು ನಿವಾಸಿ ಜನಾರ್ದನ(39)ನನ್ನು ಕುಂಬಳೆ ಎಸ್‌ಐ ವಿ.ಕೆ.ವಿಜಯನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಆ. 18ರಂದು ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ನಡೆಸಿದ ತನಿಖೆಯಲ್ಲಿ ವಿಜೇತಾ ಆತ್ಮಹತ್ಯೆ ಕುರಿತು ಬರೆದಿಟ್ಟ ಪತ್ರವೊಂದು ಪತ್ತೆಯಾಗಿತ್ತು. ಮೂರು ತಿಂಗಳ ಗರ್ಭಿಣಿಯಾದ ತನಗೆ ಪತಿ ನಿರಂತರ ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿತ್ತು.
ಈ ಪತ್ರವನ್ನು ವಶಕ್ಕೆ ತೆಗೆದುಕೊಂಡ ಪೊಲೀ ಸರು ಸಮಗ್ರ ತನಿಖೆ ನಡೆಸಿದ್ದರು. ತನಿಖೆಯಲ್ಲಿ ವಿಜೇತಾ ಸಾವಿಗೆ ಕಾರಣ ಜನಾರ್ದನನ ಕಿರುಕುಳ ವಾಗಿದೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಜನಾರ್ದನ ಹಾಗೂ ವಿಜೇತ ಅವರ ವಿವಾಹ ಒಂದೂವರೆ ವರ್ಷದ ಹಿಂದೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.