MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

ನಿನ್ನೆ ಕಾನೂನು ತಜ್ಞರೊಂದಿಗೆ ದೀರ್ಘ‌ ಸಮಾಲೋಚನೆ ಮೋದಿ, ಎಚ್‌ಡಿಕೆ ರಾಜೀನಾಮೆ ಏಕೆ ಕೊಟ್ಟಿಲ್ಲ: ಸಿಎಂ

Team Udayavani, Sep 27, 2024, 7:45 AM IST

CM-vidhna

ಬೆಂಗಳೂರು: “ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ’.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಡಕ್‌ ನುಡಿ. ದಿನೇ ದಿನೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಮುಡಾ ಪ್ರಕರಣ ಲೋಕಾಯುಕ್ತ ತನಿಖೆಗೆ ನ್ಯಾಯಾಲಯದಿಂದ ಶಿಫಾರಸುಗೊಂಡಿದ್ದು, ಎಫ್ಐಆರ್‌ ದಾಖಲಾದರೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಪಟ್ಟುಹಿಡಿದ್ದಾರೆ.

ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಆದೇಶ ಪ್ರತಿಯನ್ನು ಅವಲೋಕಿಸಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದರು. ಅನಂತರ ಕೇರಳಕ್ಕೆ ತೆರಳಿದ್ದ ಅವರು ಕಾರ್ಯಕ್ರಮವೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ರಾತ್ರಿ ಬೆಂಗಳೂರಿಗೆ ವಾಪಸಾದರು. ಗುರುವಾರ ಬೆಳಗ್ಗೆ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಸೇರಿದಂತೆ ಹಲವರೊಂದಿಗೆ ಸಮಾಲೋಚನೆ ನಡೆಸಿದರು. ಮಧ್ಯಾಹ್ನ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ಏಕೆಂದರೆ ಈ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ ಎಂದರು.

ಮೋದಿ, ಎಚ್‌ಡಿಕೆ ಕೊಟ್ಟಿದ್ದಾರೆಯೇ?
ಗೋಧ್ರಾ  ಹತ್ಯಾಕಾಂಡ ಪ್ರಕರಣದಲ್ಲಿ ಮೋದಿ ವಿರುದ್ಧ ಎಫ್ಐಆರ್‌ ಆಗಿತ್ತಲ್ಲಾ? ನೂರಾರು ಜನ ಸತ್ತಿದ್ದರಲ್ಲಾ? ಆಗ ಅವರು ರಾಜೀನಾಮೆ ಕೊಟ್ಟಿದ್ದರೇ? ಈಗ ಪ್ರಧಾನಿ ನರೇಂದ್ರ ಮೋದಿ ಸರಕಾರದಲ್ಲಿ ಮಂತ್ರಿಯಾಗಿದ್ದಾರಲ್ಲ ಎಚ್‌.ಡಿ. ಕುಮಾರಸ್ವಾಮಿ, ಅವರೂ ಜಾಮೀನಿನ ಮೇಲಿದ್ದಾರೆ. ಕುಮಾರಸ್ವಾಮಿ ಯಾರ ಮಂತ್ರಿಮಂಡಲದಲ್ಲಿದ್ದಾರೆ? ಪ್ರಧಾನಿ ಯಾರು? ಯಾವ ಪಕ್ಷದ ಸರಕಾರ ಇದೆ? ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರೆಯೇ? ಅವರು ಕೊಡಬೇಕಲ್ಲವೇ? ಹಾಗಿದ್ದರೆ ಅವರಿಗೆ ಮುಜುಗರ ಆಗುವುದಿಲ್ಲವೇ? ನಾನೇನೂ ತಪ್ಪು ಮಾಡಿಲ್ಲ. ರಾಜೀನಾಮೆ ಕೊಡುವ ಅಗತ್ಯವಿಲ್ಲ. ಕಾನೂನಾತ್ಮಕವಾಗಿಯೇ ಹೋರಾಟ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ: ಡಿಕೆಶಿ
ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ. ನಮ್ಮ ಗ್ಯಾರಂಟಿ ಅನುಷ್ಠಾನವನ್ನು ಬಿಜೆಪಿಯವರಿಂದ ಸಹಿಸಲಾಗುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ಸಹಿಸಲಾಗುತ್ತಿಲ್ಲ. ಷಡ್ಯಂತ್ರಗಳನ್ನು ನಡೆಸುತ್ತಿದ್ದಾರೆ. ಹಳ್ಳಿಯಿಂದ ದಿಲ್ಲಿಯವರೆಗೆ ಪಕ್ಷ ಹಾಗೂ ಜನರು ಸಿಎಂ ಪರವಾಗಿದ್ದೇವೆ. ಕೇಂದ್ರ ಸರ್ಕಾರದಲ್ಲಿರುವ ಎಷ್ಟು ಜನರ ಮೇಲೆ ಆರೋಪಗಳಿಲ್ಲ? ಮೊದಲು ಅವರೆಲ್ಲಾ ರಾಜೀನಾಮೆ ಕೊಡಲಿ, ಆಮೇಲೆ ನೋಡೋಣ ಎಂದಿದ್ದಾರೆ.

“ಮುಡಾದಲ್ಲಿ ಸಿದ್ದರಾಮಯ್ಯರ ಪಾತ್ರ ಏನಿದೆ? ಅವರ ರಾಜಕೀಯ ಜನಪ್ರಯತೆಯನ್ನು ಸಹಿಸಲಾಗುತ್ತಿಲ್ಲ. ದೇವರಾಜ ಅರಸು ಅನಂತರ ಹಿಂದುಳಿದ ವರ್ಗಕ್ಕೆ ಸೇರಿದವರೊಬ್ಬರು ಇಷ್ಟು ಸುದೀರ್ಘ‌ ಕಾಲ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗುತ್ತಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿ ಅವರಿಗೆ ಯಾವ ನೈತಿಕತೆ ಇದೆ. ದೊಡ್ಡ ಸತ್ಯಹರಿಶ್ಚಂದ್ರರಂತೆ ಮಾತನಾಡುವ ಕುಮಾರಸ್ವಾಮಿ ಮೊದಲು ರಾಜೀನಾಮೆ ಕೊಟ್ಟು ಮಾತನಾಡಲಿ.” – ಜಮೀರ್‌ ಅಹ್ಮದ್‌ ಖಾನ್‌, ವಸತಿ ಸಚಿವ

“ಕುಮಾರಸ್ವಾಮಿ ವಿರುದ್ಧವೂ ಆರೋಪಗಳಿವೆ. ಅವರೂ ಜಾಮೀನಿನ ಮೇಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ವಿರುದ್ಧವೂ ಆರೋಪಗಳಿವೆ. ಚುನಾವಣೆ ಬಾಂಡ್‌ ವಿಚಾರದಲ್ಲಿ ಇಡೀ ಕೇಂದ್ರ ಸರಕಾರದ ವಿರುದ್ಧವೇ ಆಪಾದನೆಗಳಿವೆ. ಹಾಗೆ ನೋಡಿದರೆ ಇಡೀ ಕೇಂದ್ರ ಸರಕಾರದ ಸಂಪುಟದಲ್ಲಿರುವ ಎಲ್ಲ ಸಚಿವರೂ ರಾಜೀನಾಮೆ ಕೊಡಬೇಕು. ಕೊಟ್ಟಿದ್ದಾರೆಯೇ?” – ಸಂತೋಷ್‌ ಲಾಡ್‌, ಕಾರ್ಮಿಕ ಸಚಿವ

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

koliwada

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.