Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
ಮೂರು ನಕಲಿ ಶಸ್ತ್ರಾಸ್ತ್ರಗಳ ಪರವಾನಿಗೆ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ
Team Udayavani, Sep 27, 2024, 1:35 PM IST
ನವದೆಹಲಿ: ಗುರುಗ್ರಾಮ್ ನ ಸದರ್ನ್ ಪೆರಿಫೆರಲ್ ರಸ್ತೆ (SPR) ಬಳಿ ನಡೆದ ಗುಂಡಿನ ಚಕಮಕಿಯ ನಂತರ ಕ್ರೈಂ ಬ್ರಾಂಚ್(Crime Branch) ಮತ್ತು ಪೊಲೀಸರ (Police) ಜಂಟಿ ಕಾರ್ಯಾಚರಣೆಯಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ಸುಭಾಶ್ ಅಲಿಯಾಸ್ ಭಾಷಾ ಎಂದು ಗುರುತಿಸಲಾಗಿದೆ. ಹರ್ಯಾಣ ಮತ್ತು ದೆಹಲಿಯಲ್ಲಿ ಈತನ ಮೇಲೆ ಕೊಲೆ ಯತ್ನ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿ ಡಜನ್ ಗಟ್ಟಲೇ ಪ್ರಕರಣಗಳು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಗುರುವಾರ (ಸೆ.26) ರಾತ್ರಿ ತಪಾಸಣೆ ನಡೆಸುತ್ತಿದ್ದ ವೇಳೆ ಸುಭಾಶ್ ನ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಅಕ್ರಮ ಶಸ್ತ್ರಾಸ್ತ್ರ, ಪಿಸ್ತೂಲ್, ಗುಂಡುಗಳು ಹಾಗೂ ಮೂರು ನಕಲಿ ಶಸ್ತ್ರಾಸ್ತ್ರಗಳ ಪರವಾನಿಗೆ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಾಲಿಗೆ ಗುಂಡು ಹೊಡೆದು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಗ್ರಾಮ್ ನಲ್ಲಿ ದಾಳಿ ನಡೆಸುವ ಸಂಚಿನೊಂದಿಗೆ ಸುಭಾಶ್ ಬೈಕ್ ನಲ್ಲಿ ಆಗಮಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಟೋರಿಯಸ್ ಆರೋಪಿ ಸುಭಾಶ್ ನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.