Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು
Team Udayavani, Sep 27, 2024, 10:15 PM IST
ಮಲ್ಪೆ: ಮೀನುಗಾರಿಕೆಯ ಬೋಟಿನಲ್ಲಿ ಅಡುಗೆ ಕೆಲಸ ಮಾಡುತ್ತಿರುವ ವೇಳೆ ಒಲೆಗೆ ಇಟ್ಟಿದ್ದ ಎಣ್ಣೆಯ ಬಾಣಲೆಗೆ ಬಿದ್ದು
ಗಂಭೀರ ಗಾಯಗೊಂಡಿದ್ದ ಮೀನುಗಾರ ಅಂಕೋಲ ತಾಲೂಕಿನ ಬೆಲಂಬೆರ್ ಗ್ರಾಮದ ನವೀನ್ ಗೋವಿಂದ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಆ. 5ರಂದು ಅವರು ಶೇಷಾದ್ರಿ ಬೋಟಿನಲ್ಲಿ ಅಡುಗೆ ಮಾಡುತ್ತಿರುವ ವೇಳೆ ಬೋಟು ಅಬ್ಬರದ ಅಲೆಗೆ ಅಲುಗಾಡಿದ್ದು, ಈ ವೇಳೆ ನವೀನ್ ಗೋವಿಂದ ಅವರು ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಎಣ್ಣೆಯ ಬಾಣಲಿಗೆ ಬಿದ್ದಿದ್ದರು. ಪರಿಣಾಮ ಅವರ ಮುಖ ಹಾಗೂ ಬಲಗೈ ಸುಟ್ಟು ಹೋಗಿತ್ತು. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸೆ. 26ರಂದು ರಾತ್ರಿ ಮೃತಪಟ್ಟಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.