Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ
ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ
Team Udayavani, Sep 28, 2024, 11:31 AM IST
ದಾಂಡೇಲಿ: ನಗರದ ಕುಳಗಿ ರಸ್ತೆಯ ಸೇತುವೆಯಿಂದ ಕಾಳಿ ನದಿಗೆ ಜಿಗಿದಿರುವ ಮಹಿಳೆಯ ಮೃತದೇಹ ದಾಂಡೇಲಿ ತಾಲೂಕಿನ ಕರಿಯಂಪಾಲಿ ಗ್ರಾಮದ ಬಳಿಯ ನದಿಯಲ್ಲಿ ಸೆ.28ರ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಮಹಿಳೆ ಸ್ಥಳೀಯ ಗಣೇಶನಗರದ ನಿವಾಸಿ ರೇಖಾ ಶಿವಾನಂದ ಕಂಬಾರಗಣವಿ (41) ಎಂದು ತಿಳಿದು ಬಂದಿದೆ.
ರೇಖಾ ಸೆ. 26ರ ಗುರುವಾರ ಮಧ್ಯಾಹ್ನ ನಾಪತ್ತೆಯಾಗಿದ್ದು, ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸೆ. 25ರ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಳಗಿ ರಸ್ತೆಯ ಸೇತುವೆಯಿಂದ ಜಿಗಿದ ಮಹಿಳೆಯನ್ನು ಹುಡುಕುವ ಕಾರ್ಯ ಸೆ.27ರ ಶುಕ್ರವಾರ ಸಂಜೆಯವರೆಗೂ ನಡೆಸಿ, ಶನಿವಾರಕ್ಕೆ ಮುಂದುವರಿಸಲಾಗಿತ್ತು. ಸೆ.28ರ ಶನಿವಾರ ಬೆಳಿಗ್ಗೆ ಕರಿಯಂಪಾಲಿ ಗ್ರಾಮದಲ್ಲಿ ನದಿಯಲ್ಲಿ ಮೃತದೇಹ ಕಂಡುಬಂದಿದೆ. ತಕ್ಷಣ ಸ್ಥಳೀಯರು ಮಾಹಿತಿ ನೀಡಿದ್ದು, ಈ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮೃತದೇಹ ಪತ್ತೆಹಚ್ಚಿ ನದಿಯಿಂದ ಮೇಲಕ್ಕೆ ತರಲಾಯಿತು.
ವೈಲ್ಡರ್ ನೆಸ್ಟ್, ಪ್ಲೈ ಕ್ಯಾಚರ್ ಮತ್ತು ಕಾಳಿ ಅಡ್ವೆಂಚರ್ ನವರ ರಾಪ್ಟ್ ಮತ್ತು ನುರಿತ ಸಿಬ್ಬಂದಿಗಳ ತಂಡದ ಜೊತೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಹಳಿಯಾಳದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಹಿಳೆಯ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡು ಅಂತಿಮವಾಗಿ ಮಹಿಳೆಯ ಮೃತ ದೇಹವನ್ನು ಪತ್ತೆ ಹಚ್ಚಿ ನದಿಯಿಂದ ಮೇಲೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ತಹಶೀಲ್ದಾರ್ ಶೈಲೇಶ ಪರಮಾನಂದ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರು ಕೂಡ ತೆಪ್ಪದ ಮೂಲಕ ಶೋಧ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಶನಿವಾರ ಬೆಳಗ್ಗೆ ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.