Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Team Udayavani, Sep 28, 2024, 1:06 PM IST
ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು ಎಂದರು.
ಪಂಚಮಸಾಲಿ ಮೀಸಲಾತಿ ಕುರಿತು ಚರ್ಚಿಸಲು ಸಿದ್ದರಾಮಯ್ಯ ಸಮಯ ಕೊಡುತ್ತಿಲ್ಲ. ನಮ್ಮ ಸಮುದಾಯದ ಶಾಸಕರೂ ಧ್ವನಿ ಎತ್ತುತ್ತಿಲ್ಲ ಎಂಬ ಕೂಡಲಸಂಗಮ ಪೀಠದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಶ್ರೀಗಳಿಗೆ ಹಿಂದೆಯೇ ಸಮಯ ಕೊಡಿಸಿದ್ದೇವೆ. ಸುವರ್ಣ ವಿಧಾನಸೌಧದಲ್ಲೂ ಭೇಟಿಗೆ ಅವಕಾಶ ಕೊಡಿಸಿದ್ದೆವು. ಶ್ರೀಗಳು ಏಕೆ ಹೀಗೆ ಹೇಳಿದರೋ ಗೊತ್ತಿಲ್ಲ ಎಂದರು.
ಸ್ವಾಭಿಮಾನಿ ಪಂಚಮಸಾಲಿ ಸಮುದಾಯಕ್ಕೆ ಮುರುಗೇಶ ನಿರಾಣಿ ಏನು ಒಳ್ಳೆಯದ್ದನ್ನು ಮಾಡಿದ್ದಾರೆ ಹೇಳಲಿ. ಆಮೇಲೆ ನನಗೆ ಬಂಗಾರ ಕೊಡಿಸುವ ಬಗ್ಗೆ ತಿಳಿಸಲಿ. ತಮ್ಮ ಅಧಿಕಾರ ಅವಧಿಯಲ್ಲಿ ನಿರಾಣಿ ಈ ಸಮುದಾಯಕ್ಕೆ ಏನೂ ಮಾಡಲಿಲ್ಲ. ಆದರೆ, ನಾನು ಮೀಸಲಾತಿ ಹೋರಾಟದ ಪರವಾಗಿ ಇದ್ದೇನೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.