Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Team Udayavani, Sep 28, 2024, 1:22 PM IST
ತಮಿಳುನಾಡು: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಶನಿವಾರ ಬೆಳಗ್ಗೆ ಬೆಳಗ್ಗೆ 5.30ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಸೊತ್ತುಗಳು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಉದ್ದಾನಪಲ್ಲಿಯಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನ (TEPL) ಮೊಬೈಲ್ ಫೋನ್ ಬಿಡಿಭಾಗಗಳ ತಯಾರಿಕಾ ಘಟಕದ ರಾಸಾಯನಿಕ ಗೋದಾಮಿನಲ್ಲಿ ಬೆಳಿಗ್ಗೆ 5:30 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ನೌಕರರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಏಳು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಈ ಕಂಪನಿಯಲ್ಲಿ, (TEPL) ಐಫೋನ್‌ಗಳಲ್ಲಿ ಬಳಸುವ ವಿವಿಧ ಬಿಡಿಭಾಗಗಳನ್ನು ತಯಾರಿಸುತ್ತದೆ. ಸುಮಾರು 4,500 ನೌಕರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅಪಘಾತದ ಸಮಯದಲ್ಲಿ ಮೊದಲ ಪಾಳಿಯಲ್ಲಿ 1,500 ನೌಕರರು ಕರ್ತವ್ಯದಲ್ಲಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅವಘಡಕ್ಕೆ ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ.
ಇನ್ನು ಫ್ಯಾಕ್ಟರಿ ಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೋಟ್ಯಂತರ ಮೌಲ್ಯದ ಸೊತ್ತುಗಳು ನಾಶವಾಗಿರುವುದಾಗಿ ಹೇಳಲಾಗಿದೆ. ಘಟನೆಯಿಂದ ಕಿಲೋಮೀಟರ್ ದೂರದ ವರೆಗೆ ದಟ್ಟ ಹೊಗೆ ಆವರಿಸಿದ್ದು, ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Flash:
A massive fire broke out at #TataElectronics manufacturing unit in Tamil Nadu’s #Hosur. The fire started in cellphone manufacturing section, prompting employees to evacuate the premises.
Several fire engines were dispatched to evacuate employees from the site, and no… pic.twitter.com/zUyOe8RThY
— Yuvraj Singh Mann (@yuvnique) September 28, 2024
ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಗಿದ್ದು ಅಗ್ನಿಶಾಮಕ, ಹಾಗೂ ಪೊಲೀಸ್ ಸಿಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.