![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 28, 2024, 1:18 PM IST
ಬೆಂಗಳೂರು: ಸಾಲ ತೀರಿಸಲು ರಸ್ತೆಯಲ್ಲಿ ಒಂಟಿ ಮಹಿಳೆಯ ರನ್ನು ಹಿಂಬಾಲಿಸಿ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿ ಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರಹಳ್ಳಿ ನಿವಾಸಿ ರಂಗಸ್ವಾಮಿ ಅಲಿಯಾಸ್ ರಂಗ (34) ಮತ್ತು ರಾಜರಾಜೇಶ್ವರಿನಗರ ಕೃಷ್ಣಪ್ಪ ಲೇಔಟ್ ನಿವಾಸಿ ಶಿವಕುಮಾರ್ (43) ಬಂಧಿತರು. ಆರೋಪಿಗಳಿಂದ 1.50 ಲಕ್ಷ ರೂ. ಮೌಲ್ಯದ 32 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಇತ್ತೀಚೆಗೆ ದ್ವಾರಕನಗರದ ಚೆನ್ನಸಂದ್ರ ನಿವಾಸಿ ಮುನಿಯಮ್ಮ ಎಂಬುವರು ಬನಶಂಕರಿ 6ನೇ ಹಂತದ ಬಿಡಿಎ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರ ಪೈಕಿ ಒಬ್ಟಾತ ಕೆಳಗೆ ಇಳಿದು ಮುನಿಯಮ್ಮನ ಸರ ಕಿತ್ತುಕೊಂಡು ಬಳಿಕ ಬೈಕ್‌ನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಸುಲಿಗೆ ಮಾಡಿದ್ದ ಚಿನ್ನದ ಸರವನ್ನು ಹೊಸಕೆರೆಹಳ್ಳಿ ಜ್ಯುವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ. ಆರೋಪಿಗಳು ಮಂಡ್ಯ ಮೂಲದವರಾಗಿದ್ದು, ಹಲವು ವರ್ಷಗಳಿಂದ ಕುಟುಂಬದ ಜತೆಗೆ ನಗರದಲ್ಲಿ ನೆಲೆಸಿದ್ದಾರೆ. ರಂಗಸ್ವಾಮಿ ಕಾರು ಚಾಲಕನಾಗಿದ್ದರೆ, ಮತ್ತೂಬ್ಬ ಆರೋಪಿ ಶಿವಕುಮಾರ್ ಆಟೋ ಚಾಲಕನಾಗಿದ್ದಾನೆ. ಇಬ್ಬರು ದುಶ್ಚಟ, ಶೋಕಿಗಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸರಗಳವು ಕೃತ್ಯಕ್ಕೆ ಇಳಿದಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.