MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
ಈ ವಿಡಿಯೋ ಉಲ್ಲೇಖಿಸಿ ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ: ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿಯಿಂದ ಟೀಕೆ
Team Udayavani, Sep 28, 2024, 8:20 PM IST
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ದ ರಾಜ್ಯಪಾಲರಿಗೆ ದೂರು ನೀಡಿ ಕೋರ್ಟ್ ನಲ್ಲೂ ಮೇಲುಗೈ ಸಾಧಿಸಿ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾದರೂ ಬೆನ್ನು ಬಿಡದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಸಾಮಾಜಿಕ ಜಾಲತಾಣದಲ್ಲಿ 2011ರಲ್ಲಿ ವಿಪಕ್ಷ ನಾಯಕರಾಗಿದ್ದಾಗ ಸಿದ್ದರಾಮಯ್ಯ ಮಾತನಾಡಿದ್ದ ವಿಡಿಯೋ ಹಾಕಿ ರಾಜ್ಯಪಾಲರ ಅಧಿಕಾರ ವ್ಯಾಪ್ತಿ ಕುರಿತು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಸ್ನೇಹಮಯಿ ಕೃಷ್ಣ ಹಂಚಿಕೊಂಡಿರುವ ವಿಡಿಯೋದಲ್ಲಿ ಸಿದ್ದರಾಮಯ್ಯ ಮಾತನಾಡಿ ನನ್ನ ಪ್ರಕಾರ ರಾಷ್ಟ್ರಪತಿಗಳು ಸಂವಿಧಾನದ ಮುಖ್ಯಸ್ಥರು. ಅವರ ಪ್ರತಿನಿಧಿಗಳಾಗಿ ರಾಜ್ಯಪಾಲರುಗಳು ಪ್ರತಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಾರೆ. ಒಂದು ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂದು ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲೆ ಇರುತ್ತದೆ. ಹಾಗೆಯೇ ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಕೆ ಕೊಡುವ ಅವರ ಮೇಲೆ ಕ್ರಮ ತೆಗೆದುಕೊಳ್ಳುವ, ಬುದ್ದಿ ಹೇಳುವ ಅಧಿಕಾರ ರಾಜ್ಯಪಾಲರಿಗೆ ಇದೆ. ಹೀಗಿರುವಾಗ ಅವರು ಅಧಿಕಾರವನ್ನು ಚಲಾಯಿಸಿದಾಗ, ಅದನ್ನು ರಾಜಕೀಯ ಪ್ರೇರಿತ, ದುರುದ್ದೇಶ ಪೂರಿತ, ವಿರೋಧ ಪಕ್ಷದವರು ಮಾಡುತ್ತಿದ್ದಾರೆ ಎಂದು ಹೇಳಿದರೆ, ಜನ ಅದನ್ನು ನಂಬಲ್ಲ ಎಂದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಮುಡಾ ಪ್ರಕರಣ ಸಿಬಿಐ ತನಿಖೆಗೆ ವರ್ಗಾಯಿಸಲು ಹೈಕೋರ್ಟ್ಗೆ ಅರ್ಜಿ
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಗುರುವಾರ (ಸೆ.27) ಎಫ್ಐಆರ್ ದಾಖಲಾಗಿದೆ. ಕೋರ್ಟ್ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದಾರೆ. ಆದರೆ, ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಹಗರಣ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅಧಿಕಾರ ಇಲ್ಲದಿದ್ದಾಗ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಕಾರ್ಯವ್ಯಾಪ್ತಿ, ಅಧಿಕಾರ ಎಲ್ಲವೂ ನೆನಪಿತ್ತು. ಆದರೆ ಅಧಿಕಾರಕ್ಕೆ ಬಂದು, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಭ್ರಷ್ಟಾಚಾರ, ಅಕ್ರಮದ ಸುಳಿಯಲ್ಲಿ ಸಿಲುಕಿದಾಗ ರಾಜ್ಯಪಾಲರ ನಡೆ ರಾಜಕೀಯದಂತೆ ಕಂಡು ಬರುತ್ತಿರುವುದು ವಿಪರ್ಯಾಸ !#ResignSiddu #MUDAScam pic.twitter.com/tM3jAvC0QF
— BJP Karnataka (@BJP4Karnataka) September 28, 2024
ಕೇಂದ್ರ ಸಚಿವ ಎಚ್‌ಡಿಕೆ, ಬಿಜೆಪಿಯಿಂದಲೂ ಟೀಕೆ:
2011ರಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದಾಗ ಸಿದ್ದರಾಮಯ್ಯ, ಗವರ್ನರ್ ಬಗ್ಗೆ ಯಾವ ರೀತಿ ಮಾತನಾಡಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ ಎಂದು ವಿಡಿಯೋ ಸಮೇತ ಸವಾಲು ಹಾಕಿದರು. ಇದಕ್ಕೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ, ಅವರು ಹೇಳಿದ್ದಕ್ಕೆ ಉತ್ತರ ಕೊಡಬೇಕು ಎಂದು ಎಲ್ಲಿದೆ ಅಂತಾ ಗರಂ ಆಗಿದ್ದಾರೆ.
ಈ ಬಗ್ಗೆ ರಾಜ್ಯ ಬಿಜೆಪಿಯೂ ಕೂಡ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಾಕಿ ಅಧಿಕಾರ ಇಲ್ಲದಿದ್ದಾಗ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಕಾರ್ಯವ್ಯಾಪ್ತಿ, ಅಧಿಕಾರ ಎಲ್ಲವೂ ನೆನಪಿತ್ತು. ಆದರೆ ಅಧಿಕಾರಕ್ಕೆ ಬಂದು, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಭ್ರಷ್ಟಾಚಾರ, ಅಕ್ರಮದ ಸುಳಿಯಲ್ಲಿ ಸಿಲುಕಿದಾಗ ರಾಜ್ಯಪಾಲರ ನಡೆ ರಾಜಕೀಯದಂತೆ ಕಂಡು ಬರುತ್ತಿರುವುದು ವಿಪರ್ಯಾಸ ! ಎಂದು ಬಿಜೆಪಿ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.