Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್ ವಾಗ್ಧಾನ
Team Udayavani, Sep 29, 2024, 2:00 AM IST
ಚಂಡೀಗಢ: ಅ.5ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹರಿಯಾಣ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ರೈತ ಕಲ್ಯಾಣ ಆಯೋಗ, ರೈತರ ಸ್ಮಾರಕ, ರೈತರಿಗೆ ಹುತಾತ್ಮ ಸ್ಥಾನಮಾನದ ಭರವಸೆ ನೀಡಿದೆ. ಹುತಾತ್ಮ ಯೋಧರಿಗೆ 2 ಕೋಟಿ ರೂ. ನೆರವು ನೀಡುವ ಬಗ್ಗೆ ಪಕ್ಷ ವಾಗ್ಧಾನ ಮಾಡಿದೆ. ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ಬಾನ್, ವಿಪಕ್ಷ ನಾಯಕ ಭೂಪಿಂದರ್ ಸಿಂಗ ಹೂಡಾ, ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹೊÉàಟ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಬೆಳೆಗಳಿಗೆ ಎಂಎಸ್ಪಿ, 500 ರೂ.ಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಮಾಸಿಕ 2,000, 300 ಯುನಿಟ್ ಉಚಿತ ವಿದ್ಯುತ್ ಸೇರಿ 7 ಗ್ಯಾರಂಟಿಗಳನ್ನು ಕಾಂಗ್ರೆಸ್ ಈಗಾಗಲೇ ಘೋಷಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.