Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ
Team Udayavani, Sep 30, 2024, 12:06 AM IST
ಮಂಗಳೂರು/ ಉಡುಪಿ: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಭಾಷಾ ಪರೀಕ್ಷೆಯು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 22 ಕೇಂದ್ರಗಳಲ್ಲಿ ರವಿವಾರ ಸುಸೂತ್ರವಾಗಿ ನಡೆಯಿತು.
ದ.ಕ., ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪರೀಕ್ಷೆ ನೆರವೇರಿಸಲು ಸಹಕರಿಸಿದರು. ಯಾವುದೇ ರೀತಿಯ ಗೊಂದಲಗಳಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.
ಉಡುಪಿ ಜಿಲ್ಲೆಯಲ್ಲಿ 17 ಸೆಂಟರ್‌ಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆದರು. ಒಟ್ಟು 7267 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದರು. 5388 ಮಂದಿ ಪರೀಕ್ಷೆ ಬರೆದಿದ್ದರೆ 1968 ಮಂದಿ ಗೈರುಹಾಜರಾಗಿದ್ದರು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಹಾಗೂ ಅಹಿತಕರ ಘಟನೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿತ್ತು. 200 ಮೀ. ವ್ಯಾಪ್ತಿಯ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು.
ಮೊದಲ ಬಾರಿಗೆ ಪರೀಕ್ಷೆಗೆ ಪ್ರಯತ್ನಿಸಿದ್ದೇನೆ. ನಿರೀಕ್ಷೆಯಂತೆ ಪ್ರಶ್ನೆಗಳು ಬಂದಿವೆ. ಸ್ಪರ್ಧಾತ್ಮಕ ಪರೀಕ್ಷೆಯ ಅನುಭವ ಸಿಕ್ಕಿದೆ. ಮುಂದೆ ಇತರ ಕೆಪಿಎಸ್‌ಸಿ/ಯುಪಿಎಸ್‌ಸಿ ಪರೀಕ್ಷೆಗಳಿಗೂ ಇದು ಸಹಕಾರಿಯಾಗಲಿದೆ.
-ಕರೀಷ್ಮಾ ಪುತ್ತೂರು, ವಿದ್ಯಾರ್ಥಿನಿ
ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆಗೆ ಸಮರ್ಪಕ ತಯಾರಿ ನಡೆಸಿದ್ದೇನೆ. ಸರಿಯಾದ ಅಧ್ಯಯನ ನಡೆಸಿದರೆ ಪರೀಕ್ಷೆಗಳು ಕಠಿನವಾಗದು. ಸಮರ್ಪಕ ರೀತಿಯಲ್ಲಿ ಪರೀಕ್ಷೆ ಬರೆದಿದ್ದು ಉತ್ತಮ ಫಲಿತಾಂಶದ ನಿರೀಕ್ಷೆ ಇದೆ.
-ಉದಯ ಹುಬ್ಬಳ್ಳಿ, ಪರೀಕ್ಷಾರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.