Pakistan; ಬಲೂಚ್‌ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು
Team Udayavani, Sep 30, 2024, 6:00 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತದಲ್ಲಿ ಪಂಜಾಬ್ ಪ್ರಾಂತದ ಕಾರ್ಮಿಕರನ್ನು ಗುರಿಯಾಗಿಸಿ ಶಂಕಿತ ಬಂಡುಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 7ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಇಲ್ಲಿನ ಪಂಜ್ಗುರ್ ಪಟ್ಟಣದ ಖುದಾ-ಇ-ಅಬದನ್ ಪ್ರದೇಶದಲ್ಲಿನ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ಆಗಮಿಸಿದ್ದ ಕಾರ್ಮಿಕರು ದುಡಿಮೆಯ ಬಳಿಕ ಮಲಗಿದ್ದ ವೇಳೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳೊಂದಿಗೆ ಆಗಮಿಸಿದ ಬಂಡುಕೋರರು ದಾಳಿ ನಡೆಸಿದ್ದಾರೆ. ದಾಳಿಯಿಂದಾಗಿ 7 ಮಂದಿ ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೋರ್ವ ಗಾಯಗೊಂಡಿದ್ದಾರೆ. ಬಲೂಚಿಸ್ಥಾನ ಲಿಬರೇಶನ್ ಆರ್ಮಿಯೇ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆಗಸ್ಟ್‌ನಲ್ಲಿ ಉಗ್ರರು 23 ಮಂದಿಯನ್ನು ಗುಂಡು ಹಾರಿಸಿ ಕೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.