Bantwala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ
ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಸಮೀಪದ ಮಣ್ಣಾಪು ಎಂಬಲ್ಲಿ ಘಟನೆ, ಕಾರು ಸಂಪೂರ್ಣ ಜಖಂ
Team Udayavani, Sep 30, 2024, 7:08 PM IST
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಸಮೀಪದ ಮಣ್ಣಾಪು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು ಅರುಣ್ ಎಂಬವರು ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆ 4.30ರ ಸುಮಾರಿಗೆ ಅಪಘಾತವಾಗಿದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಘಟನೆಯಲ್ಲಿ ಆಲ್ಟೋ ಕಾರು ಸಂಪೂರ್ಣ ಜಖಂಗೊಂಡಿದ್ದು ಸ್ಥಳೀಯ ನಿವಾಸಿಯಾದ ಸಂಜೀವ ಮೂಲ್ಯ ಅವರ ಕಾಂಪೌಂಡ್ ಹಾನಿಯಾಗಿದೆ.
ಸ್ಥಳಕ್ಕೆ ಆಗಮಿಸಿದ ಸಂಚಾರಿ (ಟ್ರಾಫಿಕ್) ಪೊಲೀಸರು ಚಾಲಕನ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಸಾಬೀತಾಗಿದೆ. ಹಾಗಾಗಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರಿ ಎಸ್.ಐ.ಸುತೇಶ್ ತಿಳಿಸಿದ್ದಾರೆ. ಚಿಕ್ಕಮಗಳೂರು ಕಡೆಯಿಂದ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಅತೀ ವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.