Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ
Team Udayavani, Oct 1, 2024, 1:36 AM IST
ಬೆಂಗಳೂರು: ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ನೂರು ವರ್ಷಗಳಾಗಿವೆ. ಈ ಸ್ಮರಣಾರ್ಥ ಅಕ್ಟೋಬರ್ 2ರಂದು ಕೆಪಿಸಿಸಿ ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವತ್ಛತ ಪ್ರತಿಜ್ಞಾವಿಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಅಂದು ಬೆಳಗ್ಗೆ 11 ಗಂಟೆಗೆ ಗಾಂಧಿ ನಡಿಗೆಯ ಭಾಗವಾಗಿ ನಗರದ ಎಂ.ಜಿ. ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವಿನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದವರೆಗೆ ಗಾಂಧಿ ಜ್ಯೋತಿ ಪಾದಯಾತ್ರೆ ನಡೆಯಲಿದೆ. ಇದೇ ರೀತಿ, ಎಲ್ಲ ಜಿಲ್ಲಾ, ತಾಲೂಕು, ಬ್ಲಾಕ್ ಮಟ್ಟದಲ್ಲಿ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ಶಾಸಕರು ಸೇರಿದಂತೆ ಆಯಾ ಭಾಗಗಳಲ್ಲಿ ಪಕ್ಷದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬೆಂಗಳೂರು ಒಳಗೊಂಡಂತೆ ಎಲ್ಲ ಜಿಲ್ಲಾ, ತಾಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ಸ್ವತ್ಛತೆ ಮತ್ತು ಗಾಂಧೀಜಿ ವಿಚಾರಗಳ ಬಗ್ಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಝೂಮ್ ಮೂಲಕ ಏಕಕಾಲದಲ್ಲಿ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.