Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ
Team Udayavani, Oct 1, 2024, 1:42 AM IST
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳ ಜತೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು ಕೆಲಸದ ಒತ್ತಡ ಕಡಿಮೆಗೊಳಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ ಫ್ರೂಟ್ಸ್ ಬಿ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ. ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಫೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು.
ಹೀಗಾಗಿ ಮುಂದಿನ ದಿನಗಳಲ್ಲಿ ಏಕಕಾಲದಲ್ಲಿ ಎಲ್ಲ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಇಂದಿನ ಸಭೆಯಲ್ಲಿ ಭರವಸೆ ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.