MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪ
Team Udayavani, Oct 1, 2024, 1:52 AM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿ ರಕ್ಷಣೆ ಪಡೆಯುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೀಶ್ ಖರ್ಬೀಕರ್ ಅವರನ್ನು ಲೋಕಾಯುಕ್ತದ ಎಡಿಜಿಪಿಯಾಗಿ ನೇಮಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜುಲೈನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಕೊನೆಯ ದಿನ ಸಿದ್ದರಾಮಯ್ಯನವರು ಖರ್ಬೀಕರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಮುಡಾ ಪ್ರಕರಣ ಲೋಕಾಯುಕ್ತ ವಿಚಾರಣೆಗೆ ಬರಬಹುದೆಂಬ ಕಾರಣಕ್ಕಾಗಿಯೇ ಈ ರೀತಿ ಮಾಡಿದ್ದಾರೆ. ಹೀಗಾಗಿ ಮುಡಾ ನಿವೇಶನ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಲೋಕಾಯುಕ್ತ ಪೊಲೀಸ್ ಅಧಿಕಾರಿಗೆ ಹೆಚ್ಚುವರಿಯಾಗಿ ಸರಕಾರದ ಅಧೀನ ಸಂಸ್ಥೆಗಳ ತನಿಖೆ ಜವಾಬ್ದಾರಿ ಕೊಟ್ಟ ಉದಾಹರಣೆ ಇಡೀ ದೇಶದಲ್ಲೇ ಇಲ್ಲ. ಇಂತಹ ಕೆಟ್ಟ ಪರಂಪರೆಗೆ ಸಿದ್ದರಾಮಯ್ಯ ನಾಂದಿ ಹಾಡಿದ್ದಾರೆ. ಎಸ್‌ಐಟಿ ಎಡಿಜಿಪಿಯಾಗಿ ಸಣ್ಣಪುಟ್ಟ ಅಧಿಕಾರಿಗಳನ್ನು ಬಂಧಿಸಿದ್ದಷ್ಟೇ ಖರ್ಬೀಕರ್ ಅವರ ಹೆಚ್ಚುಗಾರಿಕೆ. ತಮ್ಮನ್ನು ರಕ್ಷಿಸಿಕೊಳ್ಳಲು ಮುಖ್ಯಮಂತ್ರಿ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹಿಂದಿನ ಅವಧಿಯಲ್ಲಿ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ತನಿಖಾ ಹಂತದಲ್ಲಿ ಇರುವಾಗಲೇ ಲೋಕಾಯುಕ್ತದ ಶಕ್ತಿ ಕುಂದಿಸುವ ಕೆಲಸ ಮಾಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.