Arrestted: ಕಾಲು ತುಳಿದಿದ್ದಕ್ಕೆ ಚಾಕುವಿನಿಂದ ಇರಿದು ಕೊಂದ ಯುವಕನ ಸೆರೆ!

Team Udayavani, Oct 1, 2024, 10:05 AM IST

08

ಬೆಂಗಳೂರು: ಪಿತೃಪಕ್ಷದ ಪೂಜೆ ಹಿನ್ನೆಲೆಯಲ್ಲಿ ಮದ್ಯದ ಪಾರ್ಟಿ ಮಾಡುವಾಗ ಕಾಲು ತುಳಿದ ವಿಚಾರಕ್ಕೆ ನೆರೆ ಮನೆಯ ವ್ಯಕ್ತಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸೊಣ್ಣೇನಹಳ್ಳಿ ನಿವಾಸಿ ಮೂರ್ತಿ(52) ಕೊಲೆಯಾದವರು. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಕೊಲೆ ಸಂಬಂಧ ಸೊಣ್ಣೇನಹಳ್ಳಿ ನಿವಾಸಿ ಕೀರ್ತಿ(27) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂರ್ತಿ ಹಾಗೂ ಕೀರ್ತಿ ಅಕ್ಕ-ಪಕ್ಕದ ನಿವಾಸಿಗಳಾ ಗಿದ್ದಾರೆ. ಮೂರ್ತಿ ಹಸು ಸಾಕುವ ಕೆಲಸ ಮಾಡಿದರೆ, ಕೀರ್ತಿ ಹಣಕಾಸು ವ್ಯವಹಾರ ನಡೆಸುತ್ತಿದ್ದ. ಮೂರ್ತಿ ಸಹೋದರನ ಮನೆಯಲ್ಲಿ ಭಾನುವಾರ ಪಿತೃಪಕ್ಷದ ಪೂಜೆ ಇದ್ದಿದ್ದರಿಂದ ಸ್ನೇಹಿತರು, ಸಂಬಂಧಿಕರು, ನೊರೆಹೊರೆಯವರನ್ನು ಊಟಕ್ಕೆ ಆಹ್ವಾನಿಸಲಾಗಿತ್ತು. ಊಟಕ್ಕೂ ಮುನ್ನ ಮೂರ್ತಿ ಸೇರಿ ಕೆಲವರು ಮನೆಯ ಟೆರೇಸ್‌ ಮೇಲೆ ಪಾರ್ಟಿ ಮಾಡುತ್ತಿದ್ದರು.

ಕಾಲು ತುಳಿದಿದ್ದಕ್ಕೆ ಕೊಲೆ: ಈ ವೇಳೆ ಮದ್ಯದ ಅಮಲಿನಲ್ಲಿ ಮೂರ್ತಿ, ಆರೋಪಿ ಕೀರ್ತಿಯ ಕಾಲು ತುಳಿದಿದ್ದಾರೆ. ಅದರಿಂದ ಕೋಪಗೊಂಡ ಆರೋಪಿ, ಮೂರ್ತಿ ಜತೆ ಜಗಳ ತೆಗೆದು ಪರಸ್ಪರ ಮಾತಿನ ಚಕಮಕಿ ನಡೆದಿದೆ. ಅದು ವಿಕೋಪಕ್ಕೆ ಹೋದಾಗ, ಆಕ್ರೋಶಗೊಂಡ ಕೀರ್ತಿ, ಏಕಾಏಕಿ ಚಾಕು ತೆಗೆದು ಮೂರ್ತಿಯ ಹೊಟ್ಟೆಗೆ ಇರಿದಿದ್ದಾನೆ. ಅದರಿಂದ ತೀವ್ರರಕ್ತಸ್ರಾವವಾಗಿ ಕುಸಿದು ಬಿದ್ದ ಮೂರ್ತಿಯನ್ನು ಕುಟುಂಬದ ಸದಸ್ಯರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು, ಮಾರ್ಗ ಮಧ್ಯೆಯೇ ಮೂರ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಜ್ಞಾನಭಾರತಿ ಠಾಣೆ ಪೊಲೀಸರು ಪರಿಶೀಲಿಸಿ, ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0000000

Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

000]

Bengaluru: ಬಿಎಂಟಿಸಿ ಬಸ್‌ ಹರಿದು ಬೈಕ್‌ ಸವಾರ ದುರ್ಮರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು

2-thirthahalli

Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.