![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Oct 1, 2024, 5:03 PM IST
ಸಾಗರ: ರಾಜ್ಯಪಾಲರ ದಾಳವಾಗಿರಿಸಿಕೊಂಡು ಮುಖ್ಯಮಂತ್ರಿಯವರ ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ದೂರಿದ್ದಾರೆ.
ಸಾಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಇಳಿಸಲು ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಕೆಲಸ ಮಾಡುತ್ತ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ. ಆದರೆ ಮುಖ್ಯಮಂತ್ರಿಯವರು ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ಮುಂದಿನ ಎರಡು ತಿಂಗಳು ಇದರಿಂದ ನನಗೆ ಸಮಸ್ಯೆ ಆಗಬಹುದು ಬಳಿಕ ಎದ್ದು ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಉದ್ದೇಶಪೂರ್ವಕವಾಗಿ ಮುಖ್ಯಮಂತ್ರಿಯವರ ಅಧಿಕಾರದಿಂದ ಕೆಳಗಿಳಿಸಲು ಹೋದರೆ ಜನರು ಸಹಿಸುವುದಿಲ್ಲ. ಬೇರೆ ಬೇರೆ ಕಡೆ ಬಿಜೆಪಿ ಸರ್ಕಾರ ಇದೆ. ಅಲ್ಲಿ ಇಂತಹ ಕೆಲಸ ನಡೆಯುತ್ತಿದೆಯಾ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ:
ಈಗಾಗಲೇ ಇಡಿಯನ್ನು ಮುಂದೆ ಬಿಟ್ಟು ಬಿಜೆಪಿ ಚುನಾವಣಾ ಬಾಂಡ್ ಸುಮಾರು 8 ಸಾವಿರ ಕೋಟಿ ರೂ. ಸಂಗ್ರಹಿಸಿದೆ. ಐಟಿ ಮತ್ತು ಇಡಿ ಮೂಲಕ ದೊಡ್ಡ ಉದ್ಯಮಿಗಳನ್ನು ಹೆದರಿಸಿ ಬಿಜೆಪಿ ಈ ಹಣ ಸಂಗ್ರಹಿಸಿದೆ. ಪ್ರಕರಣ ದಾಖಲಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ರಾಜ್ಯಪಾಲರು ಮುಡಾ ಪ್ರಕರಣ ತನಿಖೆಗೆ ಆದೇಶ ನೀಡಿದ್ದಾರೆ. ಮುಖ್ಯಮಂತ್ರಿಗಳ ಪತ್ನಿ ನಿವೇಶನ ವಾಪಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸೋಮಶೇಖರ ಲ್ಯಾವಿಗೆರೆ, ಕೆ.ಸಿದ್ದಪ್ಪ, ಕಲಸೆ ಚಂದ್ರಪ್ಪ, ಡಿ.ದಿನೇಶ್, ಹೊಳೆಯಪ್ಪ ಇನ್ನಿತರರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.