Protest: ಅ. 4ರಿಂದ ಗ್ರಾಮ ಪಂಚಾಯತ್ ಸೇವೆ ಬಂದ್
ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
Team Udayavani, Oct 2, 2024, 6:33 AM IST
ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿ ಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಅನಿರ್ದಿಷ್ಟಾವ ಧಿ ಹೋರಾಟ ಕೈಗೊಳ್ಳಲಾಗುವುದು ಎಂದು ಸಂಘಟನೆಗಳ ಜಿಲ್ಲಾ ಘಟಕ ತಿಳಿಸಿದೆ.
ರಾಜ್ಯದ ಶೇ. 68ರಿಂದ 70ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತ್‌ಗಳಿಂದ ಶೇ. 70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂ. ಅಭಿವೃದ್ಧಿ ಅ ಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್‌ನ ಎಲ್ಲ ಪಂಚ ನೌಕರರಾದ ಪಿಡಿಒ, ಕರವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾ ಸಿಬಂದಿ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಿದೆ. ಆದರೆ ಯಾವುದೇ ಮನವಿಗಳಿಗೂ ಸ್ಪಂದಿಸದೆ ಎಲ್ಲ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬಂದಿಯನ್ನು ನೇರ ಹೊಣೆಗಾರ ಮಾಡಲಾಗುತ್ತಿದೆ.
ಸರಕಾರ ಮತ್ತು ಇಲಾಖೆಯ ಈ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ರಾಜ್ಯಾದ್ಯಂತ ಗ್ರಾ. ಪಂ. ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಚೇರಿಯ ಎಲ್ಲ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿಷ್ಟಾವ ಧಿ ಹೋರಾಟವನ್ನು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.