D.K.,ಜಿಲ್ಲಾ ನಿ.ಸ.ನೌಕರರ ವೇದಿಕೆಯಿಂದ ಪ್ರತಿಭಟನೆ: ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹ
Team Udayavani, Oct 2, 2024, 1:03 AM IST
ಮಂಗಳೂರು: 2022ರ ಜು.1ರಿಂದ 2024ರ ಜೂ.30ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ನೌಕರರಿಗೆ ಡಿಸಿಆರ್‌ಜಿ, ಕಮ್ಯುಟೇಶನ್, ಗಳಿಕೆ ರಜೆ ನವೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು ಹಾಗೂ ಈ ಕುರಿತು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಭಾಗವಾಗಿ ದ.ಕ. ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ನಡೆಯಿತು.
ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿ’ಸೋಜಾ ಮಾತನಾಡಿ, 2022ರ ಜು.1ರಿಂದ 2024ರ ಜೂ. 30ರೊಳಗೆ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯದಿಂದ ವಂಚಿತರನ್ನಾಗಿ ಮಾಡಿ, 6ನೇ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲಾಗಿದೆ. 7ನೇ ವೇತನ ಆಯೋಗ ಪ್ರಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಕಾರಿ, ತಹಶೀಲ್ದಾರ್‌ಗಳ ಮೂಲಕ ಮನವಿ ಸಲ್ಲಿಸಲಾಗಿದೆ. ಸರಕಾರ ಶೀಘ್ರವಾಗಿ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಸದಸ್ಯ ವಿಠಲ ಶೆಟ್ಟಿಗಾರ್, ಪದಾಧಿಕಾರಿಗಳಾದ ವೇದಿಕೆ ಪದಾಧಿಕಾರಿಗಳಾದ ವಿಜಯಾ ಪೈ, ಸ್ಟಾ Âನಿ ತಾವ್ರೋ, ನಾರಾಯಣ ಅವರು ಅಭಿಪ್ರಾಯ ಮಂಡಿಸಿದರು.
ನಾರಾಯಣ ಪೂಜಾರಿ, ಮೋಹನ ಬಂಗೇರ, ಎನ್.ಆನಂದ ನಾಯ್ಕ, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರಿದ್ದರು. ಜಿಲ್ಲಾ ಸಂಚಾಲಕಿ ಮಂಜುಳಾ ಜಿ. ಸ್ವಾಗತಿಸಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.