ಮಾಜಿ ಅಧ್ಯಕ್ಷ, ನೊಬೆಲ್ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್ ಗೆ 100ನೇ ವರ್ಷದ ಸಂಭ್ರಮ
ಅಮೆರಿಕದ 39ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Team Udayavani, Oct 2, 2024, 10:46 AM IST
ಪ್ಲೈನ್ಸ್(ಅಮೆರಿಕ): ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್(Jimmy Carter) ಮಂಗಳವಾರ (ಅ.01) 100ನೇ ವರ್ಷದ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅಮೆರಿಕದ ಅಧ್ಯಕ್ಷರಲ್ಲಿ 100 ವರ್ಷ ಪೂರೈಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಜಿಮ್ಮಿ ಕಾರ್ಟರ್ ಅಮೆರಿಕದ ಹಿರಿಯ ರಾಜಕಾರಣಿ, ಅಮೆರಿಕದ 39ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಡೆಮೋಕ್ರಟಿಕ್ ಪಕ್ಷದ ಸದಸ್ಯರಾಗಿದ್ದ ಜಿಮ್ಮಿ ಕಾರ್ಟರ್ ಅವರು 1977ರಿಂದ 1981ರವರೆಗೆ ಅಮೆರಿಕದ ಅಧ್ಯಕ್ಷರಾಗಿದ್ದರು. 1971ರಿಂದ 1975ರವರೆಗೆ ಜಾರ್ಜಿಯಾದ 76ನೇ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.
ಜಿಮ್ಮಿ ಕಾರ್ಟರ್ ಅವರು ಜಾರ್ಜಿಯಾದ ಪ್ಲೈನ್ಸ್ ನಲ್ಲಿ 1924ರ ಅಕ್ಟೋಬರ್ 1ರಂದು ಜನಿಸಿದ್ದರು. ಜಿಮ್ಮಿ ಕಾರ್ಟರ್, ಪತ್ನಿ ರೋಸಾಲೈನ್ ಕಾರ್ಟರ್ ದಂಪತಿಗೆ ನಾಲ್ವರು ಮಕ್ಕಳು. ಜಿಮ್ಮಿ ಕಾರ್ಟರ್ ಅವರು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರು 1960ರಲ್ಲಿ ಪ್ಲೈನ್ಸ್ ನಲ್ಲಿ ನಿರ್ಮಿಸಿದ್ದ ಮನೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಅಟ್ಲಾಂಟಾ ಜರ್ನಲ್ ವರದಿ ಪ್ರಕಾರ, ಜಿಮ್ಮಿ ಕಾರ್ಟರ್ ಅವರು ಸುಮಾರು 20 ಮಂದಿ ಕುಟುಂಬ ಸದಸ್ಯರ ಜೊತೆ 100ನೇ ಜನ್ಮ ದಿನ ಆಚರಿಸಿಕೊಂಡಿರುವುದಾಗಿ ತಿಳಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಜಿಮ್ಮಿ ಕಾರ್ಟರ್ ಗೆ 100ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.