Uppinangady: ಕಾರು-ಬೈಕ್ ಢಿಕ್ಕಿ: ಸವಾರರು ಗಂಭೀರ
Team Udayavani, Oct 3, 2024, 12:48 AM IST
ಉಪ್ಪಿನಂಗಡಿ: ಕಾರು ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕರಾಯದ ಭಾರತ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಅ. 1ರಂದು ಸಂಜೆ ನಡೆದಿದೆ.
ಅನ್ಸಾರ್ ಹಾಗೂ ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಾರಿಂಜಕಟ್ಟೆ ನಿವಾಸಿಗಳು ಎನ್ನಲಾಗಿದೆ. ಇವರು ಬೈಕ್ನಲ್ಲಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಕಲ್ಲೇರಿ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರು ಮತ್ತೊಂದು ದಿಕ್ಕಿನಲ್ಲಿರುವ ಪೆಟ್ರೋಲ್ ಬಂಕ್ಗೆಂದು ಬಲಬದಿಗೆ ತಿರುಗಿಸಿದ್ದು, ಈ ಸಂದರ್ಭ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಿಂದ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಅನ್ಸಾರ್ ಅವರ ಕಾಲು ಮುರಿತಕ್ಕೊಳಗಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂ¤ರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Karkala: ಕಾರು ಹರಿದು ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.