Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!


Team Udayavani, Oct 3, 2024, 8:51 AM IST

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

ಟೆಲ್‌ಅವೀವ್‌: ಇರಾನ್‌-ಇಸ್ರೇಲ್‌ ಯುದ್ಧವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಇರಾನ್‌ ದಾಳಿ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲದ ಬೆಲೆ ಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಮಧ್ಯಪ್ರಾಚ್ಯದ ಸಂಘರ್ಷವು ತೈಲ ಪೂರೈಕೆ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡಬಹುದು ಎಂಬ ಭೀತಿ ಆವರಿಸಿದೆ. ಪರಿಣಾಮವೆಂಬಂತೆ, ಬುಧವಾರ ಕಚ್ಚಾ ತೈಲದ ಬೆಲೆ ಶೇ.5ರಷ್ಟು ಹೆಚ್ಚಳವಾಗಿದೆ. ವೆಸ್ಟ್‌ ಟೆಕ್ಸಾಸ್‌ ಇಂಟರ್‌ಮೀಡಿಯೇಟ್‌ ಕಚ್ಚಾ ತೈಲ ಬೆಲೆ ಶೇ.5 ಏರಿಕೆಯಾಗಿದ್ದು, ಬ್ಯಾರೆಲ್‌ಗೆ 75 ಡಾಲರ್‌(6,297 ರೂ.)ಗೆ ತಲುಪಿದೆ. ಬ್ರೆಂಟ್‌ ಕಚ್ಚಾ ತೈಲದ ಬೆಲೆ 156ರೂ. ಏರಿಕೆಯಾಗಿ, ಬ್ಯಾರೆಲ್‌ಗೆ 6,177ರೂ. ಆಗಿದೆ.

ಇನ್ನು, ಯುದ್ಧದ ಕಾರ್ಮೋಡವು ಜಾಗತಿಕ ಷೇರು ಮಾರುಕಟ್ಟೆ ಮೇಲೂ ಪ್ರಭಾವ ಬೀರಿದೆ. ಅಮೆರಿಕದ ನಾಸಾxಕ್‌ ಶೇ.1 ಕುಸಿತ ಅನುಭವಿಸಿದೆ. ಟೋಕಿಯೊ, ಸಿಡ್ನಿ ಷೇರು ಮಾರುಕಟ್ಟೆಗಳೂ ಪತನಗೊಂಡಿವೆ. ರಕ್ಷಣ ಕ್ಷೇತ್ರದ ಷೇರುಗಳು ಮಾತ್ರ ಚೇತರಿಸಿಕೊಂಡಿವೆ. ನಾರ್ತ್‌ರಾಪ್‌ ಗ್ರಮ್ಮನ್‌ ಶೇ.3, ಲಾಕ್‌ಹೀಡ್‌ ಮಾರ್ಟಿನ್‌ ಶೇ.3.6 ಸೇರಿದಂತೆ ರಕ್ಷಣ ವಲಯದ ಕಂಪೆನಿಗಳ ಷೇರು ಮೌಲ್ಯ ಹೆಚ್ಚಳವಾಗಿವೆ.

ಬಾಂಬೆ ಷೇರು ಪೇಟೆಯಲ್ಲಿ ಇಂದು ಏನಾಗಲಿದೆ?

ಇಸ್ರೇಲ್‌ ಮೇಲೆ ಇರಾನ್‌ ದಾಳಿ ನಡೆಸಿದ್ದರಿಂದ ಬಾಂಬೆ ಷೇರುಪೇಟೆಯಲ್ಲಿ ವಹಿವಾಟು ಏನಾಗಲಿದೆ ಎಂಬ ಆತಂಕ ಹೂಡಿಕೆದಾರರಲ್ಲಿದೆ.  ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಬುಧವಾರ ಬಾಂಬೆ ಷೇರು ಮಾರುಕಟ್ಟೆ ವಹಿವಾಟಿಗೆ ರಜೆ ಇತ್ತು. ಹೀಗಾಗಿ ಯುದ್ಧವು ಭಾರತದ ಷೇರುಪೇಟೆ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಗುರುವಾರದ ವಹಿವಾಟಿನ ವೇಳೆ ತಿಳಿಯಲಿದೆ.

ಎಚ್ಚರಿಕೆಯಿಂದಿರಿ: ನಾಗರಿಕರಿಗೆ ಭಾರತ ಸೂಚನೆ

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮನೆ ಮಾಡಿರುವಂತೆಯೇ ಎಚ್ಚರಿಕೆಯಿಂದಿರುವಂತೆ ಭಾರತೀಯ ನಾಗರಿಕರಿಗೆ ಕೇಂದ್ರ ಸರಕಾರ ಸೂಚಿಸಿದೆ. ಇರಾನ್‌ಗೆ ಅನಗತ್ಯವಾಗಿ ಪ್ರಯಾಣಿಸಬೇಡಿ. ಟೆಹರಾ ನ್‌ನಲ್ಲಿರುವ ಭಾರತೀಯರು ಅಲ್ಲಿನ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಿ ಎಂದು ವಿದೇಶಾಂಗ ಇಲಾಖೆ ಸೂಚಿಸಿದೆ. ಇದೇ ವೇಳೆ, ಇಸ್ರೇಲ್‌ನಲ್ಲಿರುವ ಭಾರತೀಯರೂ ಸರಕಾರದ ಸುರಕ್ಷ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಅನಗತ್ಯವಾಗಿ ಹೊರಗೆ ಹೋಗದಂತೆ ತಿಳಿಸಿದೆ.

ಎಲ್ಲರೂ ಶಾಂತಿ ಕಾಪಾಡಿ: ಭಾರತ ಕರೆ

ಇರಾನ್‌-ಇಸ್ರೇಲ್‌ ಯುದ್ಧದ ಕಾರ್ಮೋಡದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಭಾರತ ಸರಕಾರ, “ಪಶ್ಚಿಮ ಏಷ್ಯಾದ ಪರಿಸ್ಥಿತಿ ಕಳವಳಕಾರಿಯಾಗಿದೆ. ಈ ಸಂಘರ್ಷವು ಮತ್ತಷ್ಟು ವಿಸ್ತರಣೆಯಾಗದಂತೆ ನೋಡಿಕೊಳ್ಳಿ. ಎಲ್ಲ ಕಡೆಯವರೂ ಶಾಂತಿ ಕಾಪಾಡಿ. ಮಾತುಕತೆ, ರಾಜತಾಂತ್ರಿಕತೆ ಮೂಲಕ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಿ’ ಎಂದಿದೆ.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.