Raichur: ಒಳ ಮೀಸಲಾತಿ ಜಾರಿಗಾಗಿ ಬಂದ್
Team Udayavani, Oct 3, 2024, 11:50 AM IST
ರಾಯಚೂರು: ಸುಪ್ರಿಂ ಕೋರ್ಟ್ ಆದೇಶದನ್ಚಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮಾಡದೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆ.3ರ ಗುರುವಾರ ರಾಯಚೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ನಗರದ ಕೇಂದ್ರ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಿದರು.
ಹೈದರಾಬಾದ್ ರಸ್ತೆಯಿಂದ ರಾಯಚೂರಿಗೆ ಬರುವ ಬಸ್ ಗಳನ್ನೂ ಹೊರವಲಯದ ಬೈಪಾಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ನಗರದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಲಿಸಲಾಗಿದೆ. ನವೋದಯ ಕಾಲೇಜು, ಬಸವೇಶ್ವರ ವೃತ್ತ, ಸಾತ್ ಮೈಲ್ ಕ್ರಾಸ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ರ್ ಮಾಡಲಾಗಿದೆ.
ಕೇಂದ್ರ ಬಸ್ ನಿಲ್ದಾಣ, ಉಸ್ಮಾನಿಯಾ ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚರಿಸಿ ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು.
ಕಳೆದ 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಆರಂಭವಾಗಿರುವ ಒಳ ಮೀಸಲಾತಿ ಜಾರಿ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಆದರೆ, ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು, ಇದನ್ನು ಜಾರಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ. ಸಿಎಂ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಜಾರಿಗೆ ಮುಂದಾಗುತ್ತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಸಿರವಾರ: ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಿರವಾರ ಬಂದ್ ಕರೆ ನೀಡಿದ್ದು ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿದೆ.
ಆ.3ರ ಗುರುವಾರ ಬೆಳಗ್ಗೆಯಿಂದಲೇ ಅಂಗಡಿ- ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದಾಗಿದೆ.
ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಿಪಿಐ ಶಶಿಕಾಂತ ಎಂ., ಪಿಎಸ್ಐ ಅಮರೇಗೌಡ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.