Kasaragod: ಅಪರಾಧ ಸುದ್ದಿಗಳು
Team Udayavani, Oct 4, 2024, 8:24 PM IST
ಶಾಲಾ ಬಸ್ ಢಿಕ್ಕಿ ಹೊಡೆದು ಪಾದಚಾರಿ ಸಾವು
ಕಾಸರಗೋಡು: ಖಾಸಗಿ ಶಾಲೆಯೊಂದರ ಬಸ್ ಢಿಕ್ಕಿ ಹೊಡೆದು ಪಾದಚಾರಿ ಹೊಸದುರ್ಗ ಕಿಳಿಕುಂಗರೆ ಮಣಾಲಿನ ಎಂ.ಕೃಷ್ಣನ್(75) ಸಾವಿಗೀಡಾದರು. ಹೊಸದುರ್ಗ ಕೋಟಚ್ಚೇರಿಯಲ್ಲಿ ಅಪಘಾತ ಸಂಭವಿಸಿದೆ.
ಘರ್ಷಣೆ : ಇಬ್ಬರಿಗೆ ಗಾಯ
ಮಂಜೇಶ್ವರ: ತೂಮಿನಾಡಿನ ಹೊಟೇಲೊಂದರ ಮುಂಭಾಗ ತಂಡಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಮಂಜೇಶ್ವರ ನಿವಾಸಿ ಅಶ್ವತ್ಥ್ ಮತ್ತು ಪ್ರಜ್ವಲ್ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ನೇಣು ಬಿಗಿದು ಆತ್ಮಹತ್ಯೆ
ಮುಳ್ಳೇರಿಯ: ಕಾರಡ್ಕ ಕರ್ಮಂತೋಡಿ ಬಳಿಯ ಕುಂಡಡ್ಕ ನಿವಾಸಿ, ಕೂಲಿ ಕಾರ್ಮಿಕ ಕೇಶವನ್ ಕೆ(55) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೆರೆಗೆ ಬಿದ್ದು ಮಹಿಳೆ ಸಾವು
ಕುಂಬಳೆ: ಪೆರ್ಮುದೆ ಎಡಕ್ಕಾನದ ಕಾಂತಪ್ಪ ಗೌಡ ಅವರ ಪುತ್ರಿ ಲಕ್ಷ್ಮೀ ಕೆ.(46) ಮನೆ ಸಮೀಪದ ಕೆರೆಯಲ್ಲಿ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರಿವೇಡಗಂನಲ್ಲಿ ಸ್ಫೋಟ : ಮನೆ ಮಾಲಕನಿಗೆ ಗಾಯ
ಕಾಸರಗೋಡು: ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕರಿವೇಡಗಂ ಬಂಡಂಗೈಯಲ್ಲಿ ಮನೆಯೊಳಗೆ ನ್ಪೋಟ ನಡೆದಿದ್ದು, ಮನೆ ಒಡೆಯ ಮೋಹನನ್(40) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮನೆಯೊಳಗೆ ಪಟಾಕಿ ಸಿಡಿಸಿದಾಗ ಗಾಯಗೊಂಡಿದ್ದಾರೆನ್ನಲಾಗಿದೆ.
ಜನರಲ್ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ
ಕಾಸರಗೋಡು: ನಗರದ ಜನರಲ್ ಆಸ್ಪತ್ರೆಯಲ್ಲಿ ತಮಿಳುನಾಡು ನಿವಾಸಿ ಯುವಕನೋರ್ವ ಮದ್ಯದಮಲಿನಲ್ಲಿ ದಾಂಧಲೆ ನಡೆಸಿದ್ದು, ಈ ಸಂದರ್ಭದಲ್ಲಿ ಸೆಕ್ಯೂರಿಟಿಗಳಿಬ್ಬರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.