Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ
ತಡೆಯಲು ಹೋದ ವಸಂತನ ಮೇಲೂ ಹಲ್ಲೆ, ಆರೋಪಿ ಸೆರೆ
Team Udayavani, Oct 5, 2024, 12:25 AM IST
ಮಡಿಕೇರಿ: ಕುಶಾಲನಗರದ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿವಾದದಲ್ಲಿ ಓರ್ವನು ಇಬ್ಬರನ್ನು ಕೊಡಲಿಯಿಂದ ಕಡಿದು ಕೊಂದಿದ್ದು, ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಹಲ್ಲೆಯಿಂದ ಬಸವೇಶ್ವರ ಬಡಾವಣೆ ನಿವಾಸಿ ಜೋಸೆಫ್ (55) ಸ್ಥಳದಲ್ಲೇ ಮೃತಪಟ್ಟಿದ್ದು, ಸುಂದರನಗರ ನಿವಾಸಿ ವಸಂತ (46) ಅವರು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿ ಬಸವೇಶ್ವರ ಬಡಾವಣೆಯ ನಿವಾಸಿ ಗಿರೀಶ್(29)ನನ್ನು ಪೊಲೀಸರು ಬಂಧಿಸಿದ್ದಾರೆ.
ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದ ಜೋಸೆಫ್ ಹಾಗೂ ವಸಂತ ಅವರು ಮನೆಯ ಬಳಿ ಇದ್ದಾಗ ಗಿರೀಶ್ ಬಂದು, ಈ ಹಿಂದೆ ಮಾಡಿದ ಕೆಲಸದ ಬಾಕಿ ಹಣ ನೀಡುವಂತೆ ಜೋಸೆಫ್ ಅವರಲ್ಲಿ ಕೇಳಿದ್ದ. ಅದಕ್ಕೆ, ತಾನು ಯಾವುದೇ ಹಣ ನೀಡಲು ಬಾಕಿ ಇರುವುದಿಲ್ಲ ಎಂದು ಜೋಸೆಫ್ ಹೇಳಿದಾಗ ಕೋಪಗೊಂಡ ಗಿರೀಶ್ ತನ್ನ ಮನೆಗೆ ಹೋಗಿ ಕೊಡಲಿ ತಂದು ಜೋಸೆಫ್ ಮೇಲೆ ಹಲ್ಲೆ ನಡೆಸಿದ್ದಾನೆ. ತಡೆಯಲು ಹೋದ ವಸಂತನ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್ ಕೆ., ಪಿಎಸ್‌ಐ ಮೋಹನ್‌ರಾಜು ಪಿ. ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆ ತಜ್ಞರ ತಂಡ ಭೇಟಿ ನೀಡಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ
Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ
Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್ ಅಲರ್ಟ್!
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.