PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Team Udayavani, Oct 5, 2024, 1:41 AM IST
ಬೆಂಗಳೂರು: ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಅಧಿಕಾರಿಗಳ ಹಾಗೂ ನೌಕರರ ನ್ಯಾಯ
ಯುತ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ.
ಪಂಚಾಯತ್‌ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ. ದಿನದಿಂದ ದಿನಕ್ಕೆ ಕೆಲಸದ ಒತ್ತಡ ತೀವ್ರಗೊಳ್ಳುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕಾರ್ಯದರ್ಶಿ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವಾಗ ಪಿಡಿಒಗಳ ಸಲಹೆ ಗಳನ್ನು ಪರಿಗಣಿ ಸದೆ ಅಳವಡಿಸ ಲಾದ ಅವೈಜ್ಞಾನಿಕ ನಿಯಮ ಕೈಬಿಡ ಬೇಕು. ಕುಂದುಕೊರತೆ ಪ್ರಾಧಿಕಾರ ವನ್ನು ಚುರುಕುಗೊಳಿಸಬೇಕು. ಪಂಚಾ
ಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾ ದರೆ ಹೋರಾಟ ತೀವ್ರ ಗೊಳಿಸುವುದಾಗಿ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.