Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ
ಕುಡಿತದಿಂದ ಕೆಲಸ ಕಳೆದುಕೊಂಡಿದ್ದ ಯುವಕ ; ಇದಕ್ಕೆ ತನ್ನ ಇಬ್ಬರು ಸ್ನೇಹಿತರೇ ಕಾರಣ ಎಂದು ಗಲಾಟೆ
Team Udayavani, Oct 5, 2024, 1:01 PM IST
ಬೆಂಗಳೂರು: ಕೆಲಸ ಬಿಡಿಸಿದ ಕಾರಣಕ್ಕೆ ಕುಡಿದು ಬಂದು ಜಗಳ ಮಾಡುತ್ತಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಮೈಕೋ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಸುಜಿತ್ (22) ಕೊಲೆಯಾ ದವ. ಕೃತ್ಯ ಎಸಗಿದ ಆತನ ಸ್ನೇಹಿತರಾದ ಸಂಜಯ್ (24) ಮತ್ತು ಅವಾನ್ (24) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು ಅ.3ರಂದು ರಾತ್ರಿ ತಮ್ಮ ಸ್ನೇಹಿತ ಸುಜಿತ್ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಹತ್ಯೆಗೈದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಬಿಹಾರ ಮೂಲದ ಸುಜಿತ್ ಹಾಗೂ ಇಬ್ಬರು ಆರೋ ಪಿಗಳು 3 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಬಿಳೇಕಹಳ್ಳಿಯಲ್ಲಿರುವ ಫ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಹೊತ್ತು ಅಲ್ಲಿಯೇ ಮಲಗುತ್ತಿ ದ್ದರು. ಆದರೆ, ಸುಜಿತ್ ಸರಿಯಾಗಿ ಕೆಲಸ ಮಾಡಿಸುತ್ತಿರ ಲಿಲ್ಲ. ಜತೆಗೆ ಮದ್ಯ ಸೇವಿಸುತ್ತಿದ್ದ. ಅದರಿಂದ ಮೂವರು ಸ್ನೇಹಿತರ ನಡುವೆ ಜಗಳವಾಗುತ್ತಿತ್ತು. ಈ ಮಧ್ಯೆ ಸುಜಿತ್ ನನ್ನು ಮಾಲೀಕರು ಕೆಲಸದಿಂದ ತೆಗೆದಿದ್ದರು. ಅದರಿಂದ ಕೋಪಗೊಂಡಿದ್ದ ಸುಜಿತ್ ಬೇರೆಡೆ ವಾಸವಾಗಿದ್ದ.
ಆದರೂ ಫ್ಲೈವುಡ್ ಅಂಗಡಿ ಬಳಿ ಬಂದು, ಮಾಲಿಕರು ಕೆಲಸದಿಂದ ತೆಗೆಯಲು “ನೀವುಗಳೇ ಕಾರಣ’ ಎಂದು ಇಬ್ಬರು ಸ್ನೇಹಿತರ ಜತೆ ಗಲಾಟೆ ಮಾಡುತ್ತಿದ್ದ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮದ್ಯ ಸೇವಿಸಿ ಬಂದಿದ್ದ ಸುಜಿತ್, ಆರೋಪಿಗಳ ಜತೆ ಜಗಳ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ, ಆರೋ ಪಿಗಳು ಸುಜಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ಬಳಿಕ ಆತಂಕಗೊಂಡ ಆರೋಪಿಗಳು ಸ್ಥಳದಿಂದ ಪರಾ ರಿಯಾಗಿದ್ದರು. ಕೆಲ ಹೊತ್ತಿನ ಬಳಿಕ ಇತರೆ ಕಾರ್ಮಿಕರು ಅಂಗಡಿಗೆ ಬಂದಾಗ ಕೊಲೆ ವಿಚಾರ ಬೆಳಕಿಗೆ ಬಂದಿದೆ.
ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ ಕೆಲ ಹೊತ್ತಿನಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತನ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.