Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

ಕದ್ದ ಚಿನ್ನ ಮಹಾರಾಷ್ಟ್ರದ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದ ಖದೀಮರು

Team Udayavani, Oct 5, 2024, 8:56 PM IST

1-vij

ವಿಜಯಪುರ: ಇಂಡಿ ತಾಲೂಕಿನ ಹೊರ್ತಿ ಠಾಣಾ ವ್ಯಾಪ್ತಿಯ ಏಳು ಹಾಗೂ ದೇವರ ಹಿಪ್ಪರಗಿ ಠಾಣಾ ವ್ಯಾಪ್ತಿಯ ಒಂದು ಪ್ರಕರಣ ಸೇರಿ ಒಟ್ಟು ಎಂಟು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಬೇಧಿಸಿದ್ದಾರೆ. ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ, 184 ಗ್ರಾಂ ಚಿನ್ನ ಮತ್ತು 80 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ. ಇನ್ನುಳಿದ ಐವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಈ ಖದೀಮರ ಬಂಧನಕ್ಕೂ ಪೊಲೀಸರು ಬಲೆಬೀಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಇಂಡಿ ತಾಲೂಕಿನ ಹೊರ್ತಿ, ಅಗಸನಾಳ, ಹಳಗುಣಕಿ, ಇಂಚಗೇರಿ ಗ್ರಾಮಗಳಲ್ಲಿ ನಡೆದ 7 ಮನೆ ಕಳ್ಳತನ ಹಾಗೂ 1 ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸ್ ತಂಡವು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಪಾಂಡುಜರಿ ತಾಂಡಾದ ವಿಕಿ ಅಲಿಯಾಸ್ ವಿಕ್ಯಾ ಮತ್ತು ಸಂಜು ಪವಾರ ಎಂಬುವರನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಇಬ್ಬರು ಖದೀಮರು ತಮ್ಮ ಐವರು ಸಹಚರರೊಂದಿಗೆ ಸೇರಿಕೊಂಡು ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುತ್ತಿದ್ದರು. ಕಳ್ಳತನ ಮತ್ತು ಸುಲಿಗೆ ಕೃತ್ಯದಲ್ಲಿ ಭಾಗವಹಿಸುತ್ತಿದ್ದರು. ಈ ಬಗ್ಗೆ ಸಂಶಯದ ಮೇಲೆ ಜತ್ತ ತಾಲೂಕಿನ ಸಂಖ ಹತ್ತಿರ ಸೆಪ್ಟೆಂಬರ್ 17ರಂದು ಮೊದಲ ಆರೋಪಿಯನ್ನು ಹಾಗೂ ಎರಡನೇ ಆರೋಪಿಯನ್ನು ಸೋಲಾಪೂರದ ಸೋರೆಗಾಂವ ಪೊಲೀಸ್ ಚೆಕ್ ಪೋಸ್ಟ್ ಬಳಿ ಸೆಪ್ಟೆಂಬರ್ 22ರಂದು ವಶಕ್ಕೆ ಪಡೆಯಲಾಗಿತ್ತು. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಆರೋಪಿತರು ತಮ್ಮ ಕೃತ್ಯವನ್ನು ಬಾಯ್ಬಿಟ್ಟಿದ್ದರು ಎಂದು ಮಾಹಿತಿ ನೀಡಿದರು.

ಅಂತಾರಾಜ್ಯ ಕಳ್ಳರಾಗಿದ್ದ ಇವರನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿತ್ತು. ನೆರೆ ರಾಜ್ಯದ ಪೊಲೀಸರ ನೆರವು ಪಡೆದು ಕದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 8 ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿತರಿಂದ 9.55 ಲಕ್ಷ ರೂ. ಮೌಲ್ಯದ 184.57 ಗ್ರಾಂ ತೂಕದ ಬಂಗಾರ ಮತ್ತು 80 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ 5 ಲಕ್ಷ ರೂ. ಮೌಲ್ಯದ ಜೈಲೋ ಕಾರನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ 50 ಗ್ರಾಂ ಚಿನ್ನಾಭರಣವನ್ನು ಖದೀಮವರು ಮಹಾರಾಷ್ಟ್ರದ ಬ್ಯಾಂಕ್‌ವೊಂದರಲ್ಲಿ ಠೇವಣಿ ಇರಿಸಿದ್ದರು. ಇದನ್ನು ಜಪ್ತಿ ಮಾಡುವಲ್ಲಿ ಬ್ಯಾಂಕ್ ಅಧಿಕಾರಿಗಳು ಸಹ ಸಹಕಾರ ನೀಡಿದ್ದಾರೆ. ತಲೆ ಮರೆಸಿಕೊಂಡಿರುವ ಇತರ ಐವರ ಬಂಧನಕ್ಕೂ ಕ್ರಮ ವಹಿಸಲಾಗಿದೆ ಎಂದು ಎಸ್‌ಪಿ ವಿವರಿಸಿದರು.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.