ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
Team Udayavani, Oct 6, 2024, 12:05 AM IST
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಖಾಸಗಿ ಮತ್ತು ಅನುದಾನಿತ ಶಾಲೆಗಳು ಕಡ್ಡಾಯವಾಗಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಅನುಸರಿಸಬೇಕು. ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ದಲ್ಲಿ ಸಂಬಂಧಪಟ್ಟ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಬಳಿಕ ಕೇಂದ್ರ ಪಠ್ಯಕ್ರಮ ಬೋಧಿಸುತ್ತಿರುತ್ತವೆ. ಆದರೆ ಅಂತಿಮ ಪರೀಕ್ಷೆ ಸಮೀಪಿಸಿದಾಗ ಪಠ್ಯಕ್ರಮದ ಸಮಸ್ಯೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಸೂಚನೆ ನೀಡಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ, ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪ್ರಮಾಣ ಪತ್ರದಲ್ಲಿ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಪುಸ್ತಕಗಳನ್ನು ಅನುಸರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.