Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ
Team Udayavani, Oct 6, 2024, 6:55 AM IST
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳಾ ಟೆಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ (27) ಆತ್ಮಹತ್ಯೆ ಮಾಡಿಕೊಂಡ ಟೆಕಿ. ಈ ಸಂಬಂಧ ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆಕೆಯ ಪತಿ ಸುದೀಪ್ (30) ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮೇಘನಾ ಶೆಟ್ಟಿ 3 ವರ್ಷಗಳ ಹಿಂದೆ ಸಾಫ್ಟ್ವೇರ್ ಎಂಜಿನಿಯರ್ ಸುದೀಪ್‌ನನ್ನು ಮದುವೆಯಾಗಿದ್ದು, ದಂಪತಿಗೆ ಒಂದು ಮಗು ಇದೆ. ಇಬ್ಬರು ಖಾಸಗಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದು ಈಜಿಪುರದ ಬಾಡಿಗೆ ಮನೆಯಲ್ಲಿ ವಾಸವಾಗಿ ದ್ದರು. ಪೋಷಕರು ಕೂಡ ಪುತ್ರಿ ಮನೆ ಸಮೀಪದಲ್ಲೇ ವಾಸವಾಗಿದ್ದಾರೆ.
ವರದಕ್ಷಿಣೆ ಕಿರುಕುಳ
ಆರಂಭದಲ್ಲಿ ಚೆನ್ನಾಗಿದ್ದ ದಂಪತಿ ನಡುವೆ ಕೆಲ ತಿಂಗಳಿಂದ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತಿತ್ತು. ಪತಿ ಸುದೀಪ್, ಮೇಘನಾ ಶೆಟ್ಟಿಗೆ, ಸಂಬಳವನ್ನು ತನಗೆ ಕೊಡುವಂತೆ ಪೀಡಿಸುತ್ತಿದ್ದ. ಅದರಿಂದ ಕಾರು ಹಾಗೂ ಇತರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದ. ಆದರೆ ಮೇಘನಾ ನಿರಾಕರಿಸಿದ್ದರು ಎಂದು ಹೇಳಲಾಗಿದೆ.
ಪತಿ ನಿರಂತರವಾಗಿ ಹಣ ತಂದು ಕೊಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಮೇಘನಾ ಶೆಟ್ಟಿ ಶುಕ್ರವಾರ ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಹೊತ್ತಿನ ಬಳಿಕ ಕೋಣೆಯ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪತಿ ಸುದೀಪ್, ಮೇಘನಾ ಶೆಟ್ಟಿ ಪೋಷಕರಿಗೆ ತಿಳಿಸಿದ್ದಾನೆ. ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಪರೀಕ್ಷಿಸಿದ ವೈದ್ಯರು ಮೇಘನಾ ಶೆಟ್ಟಿ ಮೃತಪಟ್ಟಿದ್ದಾಳೆ ಎಂದು ದೃಢಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.