Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Team Udayavani, Oct 6, 2024, 7:20 AM IST
ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ ನಾಯರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವರ ಫೋಟೋವನ್ನು ದುರುಪ ಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿರುತ್ತಾರೆ.
ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ಅವರ ಫೋಟೋ ಹಾಗೂ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡು ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಉದ್ದೇಶದಿಂದ ಕೋಟ ಶ್ರೀನಿವಾಸ ಪೂಜಾರಿ ಹೆಸರನ್ನು ಕೆಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಕೋರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.