Arrested: 22 ಮನೆ ಕಳ್ಳತನ ಕೇಸ್ ಆರೋಪಿ ಸೆರೆ
Team Udayavani, Oct 6, 2024, 11:41 AM IST
ಬೆಂಗಳೂರು: ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳವು ಮಾಡುತ್ತಿದ್ದ ಕಳ್ಳನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಘುವನಹಳ್ಳಿ ಬಾಲಾಜಿ ಲೇಔಟ್ ನಿವಾಸಿ ರಘು ಅಲಿಯಾಸ್ ಪೆಪ್ಸಿ (24) ಬಂಧಿತ. ಆರೋಪಿಯಿಂದ 8.5 ಲಕ್ಷ ರೂ. ಮೌಲ್ಯದ 120 ಗ್ರಾಂ ಚಿನ್ನಾಭರಣ, ಬೈಕ್ ಜಪ್ತಿ ಮಾಡಲಾಗಿದೆ. ಸೆ.7ರಂದು ಮಂಗನಹಳ್ಳಿ ಖಾಲಿದ್ ನಯಾಜ್ ಖಾನ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು.
ಆರೋಪಿ ರಘು ಬಗ್ಗೆ ಮಾಹಿತಿ ಸಂಗ್ರಹಿಸಿ ರಘುವನಹಳ್ಳಿ ಬಾಲಾಜಿ ಲೇಔಟ್ನಲ್ಲಿ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಸ್ನೇಹಿತರಾದ ಮಿಥುನ್, ದೀಪಕ್ ಹಾಗೂ ಜೈ ದೀಪು ಎಂಬುವರ ಜತೆ ಸೇರಿಕೊಂಡು ಮನೆಗಳವು ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಈ ಮೂವರು ಆರೋಪಿಗಳನ್ನು ರಾಜರಾಜೇಶ್ವರಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ರಘು ವೃತ್ತಿಪರ ಕಳ್ಳನಾಗಿದ್ದು, ಇತ್ತೀಚೆಗಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಈತನ ವಿರುದ್ಧ ಈ ಹಿಂದೆ ವಿವಿಧ ಪೊಲೀಸ್ ಠಾಣೆಗಳಲ್ಲಿ 22 ಕನ್ನ ಕಳವು ಪ್ರಕರಣ ದಾಖಲಾಗಿವೆ. ಜ್ಞಾನಭಾರತಿ ಠಾಣೆಯಲ್ಲಿ 3, ತಮಿಳುನಾಡಿನಲ್ಲಿ 2 ಕನ್ನ ಕಳವು, ಆಂಧ್ರಪ್ರದೇಶದಲ್ಲಿ 2 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.