Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Team Udayavani, Oct 6, 2024, 4:32 PM IST
ವರುಣ್ ತೇಜ್ ನಟನೆಯ 14ನೇ ಸಿನಿಮಾ ಮಟ್ಕಾ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಮಟ್ಕಾ ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ. ಬರೋಬ್ಬರಿ 24 ವರ್ಷದ ಹಿಂದಿನ ಕಥೆಯಾಧಾರಿತ ಸಿನಿಮಾವಾಗಿರುವ ಮಟ್ಕಾದಲ್ಲಿ ವರುಣ್ ತೇಜ್ ನಾಲ್ಕು ವಿಭಿನ್ನ ಶೇಡ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಫಲಾಸ ಸಿನಿಮಾ ಖ್ಯಾತಿಯ ಕರುಣ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಟ್ಕಾ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ ಹಾಗೂ ನೋರಾ ಫತೇಹಿ ನಟಿಸುತ್ತಿದ್ದಾರೆ. ಇವರಲ್ಲದೇ ನವೀನ್ ಚಂದ್ರ, ಕನ್ನಡದ ಕಿಶೋರ್, ಅಜಯ್ ಘೋಷ್, ಮೈಮ್ ಗೋಪಿ, ರೂಪಲಕ್ಷ್ಮೀ,ವಿಜಯರಾಮ ರಾಜು, ಜಗದೀಶ್, ರಾಜ್ ತಿರಂದಾಸ್ ಸೇರಿದಂತೆ ಹಲವರು ಪ್ರಮುಖ ಪಾತ್ರದಲ್ಲಿದ್ದಾರೆ.
ಮಾಸ್ ಆ್ಯಕ್ಷನ್ ಮಟ್ಕಾ ಸಿನಿಮಾದ ಕೊನೆ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೂಟಿಂಗ್ ಕಂಪ್ಲೀಟ್ ಆಗುತ್ತಿದ್ದಂತೆ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಳ್ಳಲಿದೆ. ಡಾ ವಿಜೇಂದರ್ ರೆಡ್ಡಿ ಟೀಗಾಲ ಮತ್ತು ರಜನಿ ತಲ್ಲೂರಿ ಮಟ್ಕಾ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ, ಎ ಕಿಶೋರ್ ಕುಮಾರ್ ಅವರ ಛಾಯಾಗ್ರಹಣ,. ಕಾರ್ತಿಕಾ ಶ್ರೀನಿವಾಸ್ ಆರ್ ಸಂಕಲನ ಚಿತ್ರಕ್ಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Saira Banu: ಎ.ಆರ್.ರೆಹಮಾನ್ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.