Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ, ಸ್ವಂತ ಗೋಶಾಲೆ ಹೊಂದುವಂತಾಗಬೇಕಿದೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Team Udayavani, Oct 6, 2024, 5:09 PM IST

Pejavara-Sri

ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಹಿಂದೂ ದೇವಾಲಯಗಳು ಇನ್ನೂ ಸರಕಾರದ ವಶದಲ್ಲಿವೆ. ಪ್ರಾಚೀನ ದೇವಾಲಯಗಳನ್ನೇ ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ. ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ರಾಮ ಮಂದಿರದ ಮಾದರಿಯಲ್ಲಿ ಎಲ್ಲ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಪೇಜಾವರ ಮಠಾಧೀಶ ಹಾಗೂ ಆಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.

ರವಿವಾರ ನಗರದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ವಶದಲ್ಲಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡು
ವಂತೆ ಸುಪ್ರೀಂ ಕೋರ್ಟ್‌ ಈಗಾಗಲೇ ಆದೇಶ ನೀಡಿದೆ. ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತ ದಿಂದ ಮುಕ್ತಗೊಳಿಸಿಲ್ಲ. ಇತರ ಧರ್ಮೀಯರ ಆರಾಧನ ಸ್ಥಳಗಳು ಅವರ ಹಿಡಿತದಲ್ಲಿವೆ. ದೇವಸ್ಥಾನಗಳು ಸರಕಾರ ವಶದಲ್ಲಿರುವುದರಿಂದಲೇ ಶ್ರದ್ಧಾ ಕೇಂದ್ರ
ಗಳಿಗೆ ಅಪಚಾರಗಳು ಉಂಟಾಗುತ್ತಿವೆ. ಹಿಂದೂಗಳೇ ಶ್ರದ್ಧಾ ಕೇಂದ್ರಗಳನ್ನು ನಡೆಸಿದರೆ ಯಾವುದೇ ಅಪಚಾರಗಳು ಉಂಟಾಗಲು ಅವಕಾಶ ಇರುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.

ತಿರುಪತಿ ಲಡ್ಡು ಅಪವಿತ್ರವಾಗದಂತೆ ಸರಕಾರ ನಿಗಾ ವಹಿಸಬೇಕಿತ್ತು:
ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ತಿರುಪತಿ-ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ಜಾಗೃತ ಕೇಂದ್ರಗಳಾದಾಗ ಮಾತ್ರ ಹಿಂದೂಗಳ ನಂಬಿಕೆ, ನಡವಳಿಕೆಯ ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.

ಅಯೋಧ್ಯೆಯಲ್ಲಿ ಕಾಮಗಾರಿಗೆ ವೇಗ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ಬಳಿಕ ಕಾಮಗಾರಿ ಮುಂದುವರಿದಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಮುಗಿಸುವ ನಿಟ್ಟಿನಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಮುಂದಿನ ಒಂದೂವರೆ ವರ್ಷದೊಳಗೆ ಕಾಮಗಾರಿ ಮುಗಿಸಲು ಉದ್ದೇಶಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ
ಚೆನ್ನೈನಲ್ಲಿ ಈ ಬಾರಿಯ ಚಾತುರ್ಮಾಸ್ಯ ವ್ರತ ಮುಗಿಸಿದ ಬಳಿಕ ಅಯೋಧ್ಯೆಗೆ ತೆರಳಿ ಒಂದು ವಾರಗಳ ಕಾಲ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅಲ್ಲಿಂದ ಪ್ರಯಾಗ, ಕಾಶಿ, ಹರಿದ್ವಾರ, ಹೃಷಿಕೇಶ ಮತ್ತು ಬದರಿ ಕ್ಷೇತ್ರಗಳನ್ನು ಸಂದರ್ಶಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.