Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Team Udayavani, Oct 6, 2024, 6:50 PM IST
ದಾಂಡೇಲಿ: ಅಕ್ರಮವಾಗಿ ಕಾಯ್ದಿಟ್ಟ ತಾಲೂಕಿನ ಅಂಬೇವಾಡಿ ಅರಣ್ಯ ಪ್ರದೇಶದಲ್ಲಿ ಬೀಟೆ ಮರವೊಂದನ್ನು ಕಡಿದಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿ, ಕಡಿದ ಬೀಟೆ ಮರದ ತುಂಡನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಂಧಿತ ಆರೋಪಿ ಸ್ಥಳೀಯ ನಿವಾಸಿಯಾಗಿದ್ದು ಸರದಾರ ಮಹಮ್ಮದ್ ರಾಜೇಸಾಬ ನಾಯಕ ಈತನು ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಬೀಟೆ ಜಾತಿಯ ಮರವನ್ನು ಕಡಿಯುತ್ತಿರುವ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳು ಅದನ್ನು ನೋಡಿ ಬೀಟೆ ಮರದ ನಾಟಗಳನ್ನು ವಶಪಡಿಸಿಕೊಂಡು, ಕರ್ನಾಟಕ ಅರಣ್ಯ ಕಾಯ್ದೆ 1963 ರಲ್ಲಿ ಹಾಗೂ ಕರ್ನಾಟಕ ಅರಣ್ಯ ನಿಯಮ 1969ರಲ್ಲಿ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಕೆ. ಸಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಚೌಹ್ವಾಣ್ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಎನ್.ಎಲ್.ನದಾಫ್, ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಕೆ.ಎನ್, ಹನುಮಂತ ಆಲದಗಿಡದ, ಸಿಬ್ಬಂದಿಗಳಾದ ಸಂದೀಪ್ ಗೌಡ, ಪ್ರಹ್ಲಾದ ರೆಡ್ಡಿ, ಶಂಕರ್.ಜಿ.ನಾಯಕ ಹಾಗೂ ಇತರ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯನ್ನು ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.