Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ಸಚಿವ ವಿ. ಸೋಮಣ್ಣಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
Team Udayavani, Oct 7, 2024, 7:18 AM IST
ಕುಂದಾಪುರ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿ ಹಾಗೂ ಹೈದರಾಬಾದ್‌ಗೆ ಕಾರವಾರದಿಂದ ಕುಂದಾಪುರ -ಉಡುಪಿ- ಮಂಗಳೂರು ಮೂಲಕ ರೈಲು ಸಂಪರ್ಕ ಆರಂಭಿಸಬೇಕು ಎನ್ನುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಿದ್ದಾರೆ.
ಕಳೆದೊಂದು ದಶಕದಿಂದ ತಿರುಪತಿಗೆ ರೈಲು ಸಂಪರ್ಕ ಬೇಕೆನ್ನುವ ಬೇಡಿಕೆಯನ್ನು ಕರಾವಳಿಯ ಎಲ್ಲ ಊರುಗಳ ಜನರು ಇಡುತ್ತಿದ್ದು, ಈ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಸಂಸದರ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ, ಸಂಸದರು, ಕೊಂಕಣ ರೈಲ್ವೇ ಆಡಳಿತ ನಿರ್ದೇಶಕರು ಹಾಗೂ ನೈಋತ್ಯ ರೈಲ್ವೇ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ರೈಲ್ವೇ ಸಚಿವರಿಗೆ ಮನವಿ ಸಲ್ಲಿಸಿದರು. ಸಂಸದರ ಮನವಿಗೆ ಸೂಕ್ತವಾಗಿ ಸ್ಪಂದಿಸಿರುವ ರೈಲ್ವೇ ಸಚಿವಾಲಯ, ಕರಾವಳಿ ಕರ್ನಾಟಕವನ್ನು ತಿರುಪತಿ ಹೈದರಾಬಾದ್ ಜತೆ ಜೋಡಿಸಲು ರೈಲು ಸೇವೆ ಆರಂಭಿಸುವುದಾಗಿ ತಿಳಿಸಿದೆ.
ಕರಾವಳಿಯ ಪ್ರತಿ ಮನೆಯಿಂದಲೂ ತಿರುಪತಿಗೆ ಭೇಟಿ ಕೊಡುವ ಪರಿಪಾಠದ ಬಗ್ಗೆ, ಹೈದರಾಬಾದ್ ನಗರದಲ್ಲಿ ವಾಸವಿರುವ ಕರಾವಳಿ ಮೂಲದ ಉದ್ಯಮಿಗಳು, ಉದ್ಯೋಗಿಗಳ ಬಗ್ಗೆ ಮನವಿಯಲ್ಲಿ ಉಲ್ಲೇಖೀಸಿದ್ದಕ್ಕೆ ರೈಲ್ವೇ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಕರಾವಳಿಯಿಂದ ಹೈದರಾಬಾದಿಗೆ ರೈಲು ಸೇವೆ ಆರಂಭವಾದರೆ ತಿರುಪತಿಯ ಜತೆಗೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಂದಲೂ ಕೊಂಕಣ ರೈಲ್ವೇಯ ಸೇವೆಗಳು ಲಭ್ಯವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.