Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ
Team Udayavani, Oct 8, 2024, 9:36 AM IST
ತೀರ್ಥಹಳ್ಳಿ; ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ.
ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ.
ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಾಕ ದಳದ ಸಿಬ್ಬಂದಿಗಳು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಲಾಬಿಯವರಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು ನಂತರ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಸಂತೋಷ್ ಶೆಟ್ಟಿ, ಚಾಲಕರಾದ ಪ್ರಶಾಂತ್ ಕುಮಾರ್ ಹಾಗೂ ಶರತ್ ಎಂ, ಶಶಿಕುಮಾರ್, ನಿಂಗಪ್ಪ ಇಟ್ಟಣ್ಣನವರ್ ಸೇರಿ ಸ್ಥಳೀಯರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Belagavi: ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹೆ ಮಾತ್ರ: ಸಚಿವ ಕೃಷ್ಣ ಭೈರೇಗೌಡ
ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು
Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
RG Kar Hospital: ಕಿರಿಯ ವೈದ್ಯರ ಮುಷ್ಕರ ಬೆಂಬಲಿಸಿ ಹಿರಿಯ ವೈದ್ಯರಿಂದ ಸಾಮೂಹಿಕ ರಾಜೀನಾಮೆ
Haryana: ಕೇವಲ 210 ದಿನ ಸಿಎಂ ಆದರೂ ನಯಾಬ್ ಸಿಂಗ್ ಸೈನಿ ಹರ್ಯಾಣದ ʼನವಾಬʼನಾಗಿದ್ದು ಹೇಗೆ?
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
Mumtaz Ali Case: ಪ್ರಮುಖ ಆರೋಪಿ ರೆಹಮತ್ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.